×
Ad

ಕ್ಯಾಂಟರ್-ಜೀಪು ಢಿಕ್ಕಿ: ಓರ್ವ ಸಾವು

Update: 2016-07-04 23:31 IST

 ಕುಶಾಲನಗರ, ಜು.4: ಕುಶಾಲ ನಗರ ಸಮೀಪದ ಗುಡ್ಡೆಹೊಸೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅತ್ತೂರು ಮೀಸಲು ಅರಣ್ಯ ವಲಯದ ಅನೆಕಾಡು ರಾಜ್ಯ ಹೆದ್ದಾರಿಯಲ್ಲಿ ಕ್ಯಾಂಟರ್‌ವ್ಯಾನ್ ಮತ್ತು ಜೀಪು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತ ಪಟ್ಟು, ಹಲವರು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಮೃತಪಟ್ಟವರನ್ನು ಜೀಪ್‌ನ ಚಾಲಕ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಬಿಳಿಯೂರು ನಿವಾಸಿ ಮುಸ್ತಫಾ (38) ಎಂದು ಗುರುತಿಸಲಾಗಿದೆ. ಅಲ್ಲದೆ, ಕ್ಯಾಂಟರ್‌ವ್ಯಾನ್‌ನ ಚಾಲಕ ಕೂಡಿಗೆಯ ನಿವಾಸಿ ನಂಜುಂಡ (35), ಅದೇ ಗ್ರಾಮದ ಕೆ.ಆರ್. ರಾಣಿ, ಸತೀಶ, ಸಿದ್ದರಾಮ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಅವರಿಗೆ ಕುಶಾಲನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕ್ಸಿತೆ ನೀಡಿ ಬಳಿಕ ಹೆಚ್ಚಿನ ಚಿಕ್ಸಿತೆಗಾಗಿ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.
  ಮುಸ್ತಫಾ ಕೊಡಗು ಜಿಲ್ಲೆಯಲ್ಲಿ ಶುಂಠಿ ಬೇಸಾಯ ಮಾಡಿಕೊಂಡಿದ್ದು, ಸುಂಟಿಕೊಪ್ಪದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿತೆನ್ನಲಾಗಿದೆ. ಈ ಬಗ್ಗೆ ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ದ್ದೆಯಲ್ಲಿದ್ದೇನೆ. ತಾನು ಪ್ರದೀಪ್‌ಕುಮಾರ್ ಎಂಬುವರ ಬದಲಿಗೆ ಪರೀಕ್ಷೆ ಬರೆಯಲು ಬಂದಿರುತ್ತೇನೆಂದು ತಪ್ಪೊಪ್ಪಿಕೊಂಡಾಗ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News