ಜೂಜಾಟ: ಆರು ಮಂದಿಯ ಬಂಧನ
Update: 2016-07-05 23:27 IST
ಶಿವಮೊಗ್ಗ,ಜು.5: ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇರೆಗೆ ಪೊಲೀಸರು ಏಳು ಜನರನ್ನು ಬಂಧಿಸಿದ ಘಟನೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದ ಚಿಕ್ಕಮಾಗಡಿ ತಾಂಡಾದಲ್ಲಿ ವರದಿಯಾಗಿದೆ. ಖಚಿತ ವರ್ತಮಾನದ ಮೇರೆಗೆ ಪೊಲೀಸರು ಈ ದಾಳಿ ನಡೆಸಿದ್ದು, ಬಂಧಿತ ಆರೋಪಿಗಳಿಂದ 2,680 ರೂ. ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.