×
Ad

ಅತೀ ಶೀಘ್ರದಲ್ಲೇ ರಾಹುಲ್ ಗಾಂಧಿಗೆ ಕಾಂಗ್ರೆಸ್ ಅಧ್ಯಕ್ಷ ಪಟ್ಟ?

Update: 2016-07-06 10:32 IST

 ಹೊಸದಿಲ್ಲಿ, ಜು.6: ಸಂಸದ ರಾಹುಲ್ ಗಾಂಧಿ ಅತೀ ಶೀಘ್ರದಲ್ಲೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಪಟ್ಟ ಅಲಂಕರಿಸಲಿದ್ದಾರೆ. ರಾಹುಲ್ ಸೆಪ್ಟಂಬರ್‌ನಲ್ಲಿ ಪಕ್ಷದ ಮುಖ್ಯಸ್ಥರಾಗಲಿದ್ದಾರೆ ಎಂದು ಕಾಂಗ್ರೆಸ್‌ನ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇತ್ತೀಚೆಗೆ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕಳಪೆ ಸಾಧನೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ರಾಹುಲ್‌ಗೆ ಅಧ್ಯಕ್ಷ ಪಟ್ಟ ಕಟ್ಟುವ ಬಗ್ಗೆ ಮೇನಲ್ಲಿ ಎಐಸಿಸಿ ಸೂಚನೆ ನೀಡಿತ್ತು. ಜೂನ್‌ನಲ್ಲಿ ಪಕ್ಷದ ಹಿರಿಯ ಮುಖಂಡ ಜೈರಾಮ್ ರಮೇಶ್ ಅವರು ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳಬೇಕೆಂದು ಒತ್ತಾಯಿಸಿದ್ದರು.

 ‘‘ಅನಿಶ್ಚಿತೆ ಪಕ್ಷಕ್ಕೆ ಯಾವುದೇ ರೀತಿಯಲ್ಲೂ ನೆರವಾಗದು. 1998ರ ಮಾರ್ಚ್‌ನಲ್ಲಿ ಸೋನಿಯಾ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನ ವಹಿಸಿಕೊಂಡಾಗ ಕಾಂಗ್ರೆಸ್ ಭಾರೀ ಸವಾಲು ಎದುರಿಸುತ್ತಿತ್ತು’’ ಎಂದು ರಮೇಶ್ ನೆನಪಿಸಿದರು.

2013ರ ಜನವರಿಯಲ್ಲಿ ಜೈಪುರದಲ್ಲಿ ನಡೆದ ‘ಚಿಂತನ್ ಶಿಬಿರ’ದಲ್ಲಿ ರಾಹುಲ್‌ರನ್ನು ಕಾಂಗ್ರೆಸ್‌ನ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. 2014ರ ಲೋಕಸಭಾ ಚುನಾವಣೆಗೆ ಮೊದಲು ಈ ಆಯ್ಕೆ ನಡೆದಿತ್ತು. 2004ರ ಮೇನಲ್ಲಿ ಅಮೇಠಿ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ಬಳಿಕ ರಾಹುಲ್ ಗಾಂಧಿ ರಾಜಕೀಯದಲ್ಲಿ ಸಕ್ರಿಯರಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News