×
Ad

ಆಪ್ ಶಾಸಕ ಪ್ರಕಾಶ್ ಬಂಧನ

Update: 2016-07-08 10:08 IST

 ಹೊಸದಿಲ್ಲಿ,ಜು.8: ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದಲ್ಲಿ ದಿಲ್ಲಿ ಪೊಲೀಸರು ಆಮ್ ಆದ್ಮಿ ಪಕ್ಷದ ಶಾಸಕ ಪ್ರಕಾಶ್ ಜಾರ್ವಲ್‌ರನ್ನು ಶುಕ್ರವಾರ ಬೆಳಗ್ಗೆ ಬಂಧಿಸಿದ್ದಾರೆ.

 ಪ್ರಕಾಶ್ ವಿರುದ್ಧ ಸಂತ್ರಸ್ತ ಮಹಿಳೆ ಗ್ರೇಟರ್ ಕೈಲಾಶ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕಾಶ್ ವಿರುದ್ಧ ಐಪಿಸಿ ಸೆಕ್ಷನ್ 34, 354, 506, 509ರ ಅಡಿ ಪ್ರಕರಣ ದಾಖಲಿಸಲಾಗಿದೆ.

ಕಳೆದ ಕೆಲವು ತಿಂಗಳಿಂದ ಆಪ್ ನಾಯಕರು ವಿವಾದಗಳ ಮೂಲಕವೇ ಸುದ್ದಿಯಾಗುತ್ತಿದ್ದು, ಈ ಘಟನೆಯು ಪಕ್ಷಕ್ಕೆ ತೀವ್ರ ಹಿನ್ನಡೆ ಉಂಟು ಮಾಡಿದೆ. ಪ್ರಕಾಶ್ ಈ ಹಿಂದೆ 2014 ಮೇ 20 ರಂದು ದಿಲ್ಲಿ ಜಲ ಮಂಡಳಿಯ ಕಿರಿಯ ಎಂಜಿನಿಯರ್‌ಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧಸಲ್ಪಟ್ಟಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News