×
Ad

ಪುತ್ತೂರು: ಕಂಪ್ಯೂಟರ್ ಸಾಕ್ಷರತಾ ತರಬೇತಿ ಶಿಬಿರ

Update: 2016-07-08 23:20 IST

ಪುತ್ತೂರು, ಜು.8: ಕಂಪ್ಯೂಟರ್ ಯುಗದಲ್ಲಿ ಮಾಹಿತಿಗಳು ಬೆರಳ ತುದಿಯಲ್ಲೇ ಸಿಗುತ್ತಿದ್ದು, ನಮಗೆ ಅದನ್ನು ಬಳಸಿಕೊಳ್ಳುವ ಬಗ್ಗೆ ಮಾಹಿತಿಯ ಕೊರತೆಯಿದೆ ಅದಕ್ಕಾಗಿ ತರಬೇತಿ ಕಾರ್ಯಾಗಾರ ಅವಶ್ಯಕ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀವಿದ್ಯಾ ಹೇಳಿದರು.

ಅವರು ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ (ರಿ.), ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು, ಸಾರ್ವಜನಿಕ ಶಿಕ್ಷಣ ಇಲಾಖೆ ಪುತ್ತೂರು ಮತ್ತು ಬಂಟ್ವಾಳ ಇದರ ಸಂಯುಕ್ತ ಆಶ್ರಯದಲ್ಲಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಪ್ರಾಯೋಜಕತ್ವದಲ್ಲಿ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯುತ್ತಿರುವ ಎರಡು ದಿನಗಳ ಶಿಕ್ಷಕರ ಕಂಪ್ಯೂಟರ್ ಸಾಕ್ಷರತಾ ತರಬೇತಿ ಕಾರ್ಯಾಗಾರವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.

ಈ ಕಾರ್ಯಾಗಾರದಲ್ಲಿ ಶಿಕ್ಷಕರು ಗಳಿಸಿಕೊಂಡ ಅನುಭವಗಳನ್ನು ವಿದ್ಯಾರ್ಥಿಗಳಿಗೆ ಧಾರೆ ಎರೆದು ಅವರನ್ನು ಪ್ರತಿಭಾವಂತ ಸತ್ಪ್ರಜೆಗಳಾಗಿ ಮಾಡುವಂತೆ ತಿಳಿಸಿದರು.

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಸಂಚಾಲಕ ರಾಧಾಕೃಷ್ಣ ಭಕ್ತ ಸಮಾರಂದ ಅಧ್ಯಕ್ಷತೆ ವಹಿಸಿದ್ದರು.

ಭಾರತೀಯ ಸ್ಟೇಟ್‌ಬ್ಯಾಂಕಿನ ಮಂಗಳೂರು ವಲಯದ ವ್ಯವಸ್ಥಾಪಕ ಕದರಿ ಗುಂಡೂರಾವ್, ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಎಸ್. ಗೋವಿಂದೇ ಗೌಡ ಅತಿಥಿಯಾಗಿ ಉಪಸ್ಥಿತರಿದ್ದರು.

ಪುತ್ತೂರು ಮತ್ತು ಬಂಟ್ವಾಳ ತಾಲೂಕಿನ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳ 274 ಶಿಕ್ಷಕರು ಕಂಪ್ಯೂಟರ್ ಸಾಕ್ಷರತಾ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್‌ನ ಮುಖ್ಯಸ್ಥ ಶ್ರೀಶ ಭಟ್ ಪ್ರಸ್ತಾವನೆಗೈದರು. ಶ್ರುತಿಶ್ರೀ ಸ್ವಾಗತಿಸಿದರು. ಪೂಜಾಶ್ರೀ ವಂದಿಸಿದರು. ವಿನಾಯಕ ಪೈ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News