ಬಂಟ್ವಾಳ ಪ್ರೆಸ್‌ಕ್ಲಬ್‌ನಲ್ಲಿ ಜು.9ರಿಂದ ಕೊಲಾಜ್ ಕಲಾಕೃತಿ ಪ್ರದರ್ಶನ
ಬಂಟ್ವಾಳ, ಜು. 8: ಇಲ್ಲಿನ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಬಂಟ್ವಾಳ ಪ್ರೆಸ್ ಕ್ಲಬ್ ಹಾಗೂ ಪತ್ರಕರ್ತರ ಸಂಘದ ರಜತ ವರ್ಷಾಚರಣಾ ಸಮಿತಿಯ ಜಂಟಿ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆಯ ಅಂಗವಾಗಿ ಮಂಚಿ ಮಕ್ಕಳ ಕೊಲಾಜ್ ಕಲಾಕೃತಿಗಳ ಪ್ರದರ್ಶನ ಹಾಗೂ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷರೊಂದಿಗೆ ಸಂವಾದ ಕಾರ್ಯಕ್ರಮವು ಜು. 9ರಿಂದ 11 ರವರೆಗೆ ಬಿ.ಸಿ.ರೋಡು ಪ್ರೆಸ್ ಕ್ಲಬ್ ಸಬಾಂಗಣದಲ್ಲಿ ನಡೆಯಲಿದೆ.
ಶನಿವಾರ ಬೆಳಗ್ಗೆ 10 ಗಂಟೆಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷೆ ಕೃಪಾ ಆಳ್ವ ಕೊಲಾಜ್ ಪ್ರದರ್ಶನವನ್ನು ಉದ್ಘಾಟಿಸಲಿದ್ದು, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜ, ಪತ್ರಕರ್ತೆ ರೇಷ್ಮಾ ಜಿ.ಉಳ್ಳಾಲ್, ಮಂಚಿ ಕೊಳ್ನಾಡು ಸರಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ವಿ.ರಾಮಮೂರ್ತಿ ಮುಖ್ಯ ಅತಿಥಿಗಳಾಗಿ ಬಾಗವಹಿಸುವರು.
ಚಿತ್ರಕಲಾ ಅಧ್ಯಾಪಕ ತಾರಾನಾಥ ಕೈರಂಗಳ್ ಮಾರ್ಗದರ್ಶನದಲ್ಲಿ ಮಂಚಿಕೊಳ್ನಾಡು ಪ್ರೌಢಶಾಲೆಯ 25 ವಿದ್ಯಾರ್ಥಿಗಳು ರಚಿಸಿದ ಕೊಲಾಜ್ ಕಲಾಕೃತಿಗಳು ಜು. 9ರಿಂದ 11 ರವರೆಗೆ ಬಿ.ಸಿ.ರೋಡಿನ ಪ್ರೆಸ್ ಕ್ಲಬ್‌ನಲ್ಲಿ ಪ್ರದರ್ಶನಗೊಳ್ಳಲಿದ್ದು, ಕಲಾಸಕ್ತರು ಪ್ರದರ್ಶನ ವೀಕ್ಷಿಸಿ ಪ್ರತಿಬೆಗಳನ್ನು ಬೆಂಬಲಿಸುವಂತೆ ರಜತ ವರ್ಷಾಚರಣಾ ಸಮಿತಿ ಕಾರ್ಯದರ್ಶಿ ಸಂದೀಪ್ ಸಾಲ್ಯಾನ್ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.