ವನಿ ಹತ್ಯೆಯ ಹಿನ್ನೆಲೆಯಲ್ಲಿ ಕಾಶ್ಮೀರದಲ್ಲಿ ಹಿಂಸಾಚಾರ ; ಐದು ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ

Update: 2016-07-09 12:47 GMT

ಶ್ರೀನಗರ , ಜು.9:ಹಿಜ್ಬುಲ್‌ ಮುಜಾಹಿದ್ದಿನ್‌ ಉಗ್ರ ಸಂಘಟನೆಯ ಕಮಾಂಡರ್‌ ಬುರ್ಹಾನ್ ಮುಝಾಫರ್ ವಾನಿ ಹತ್ಯೆಯ  ಬಳಿಕ ಕಣಿವೆ ರಾಜ್ಯದಲ್ಲಿ ಕಂಡು ಬಂದಿರುವ ಹಿಂಸಾಚಾರದಲ್ಲಿ ಈವರೆಗೆ ಐದು  ಮಂದಿ ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಪ್ರತಿಭಟನಾನಿರತರು ಮೂರು ಪೊಲೀಸ್‌ ಚೌಕಿಗಳು ಸೇರಿದಂತೆ ಹಲವು ಕಟ್ಟಡಗಳು ಹಾಗೂ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ತಿಳಿದು ಬಂದಿವೆ.
21ರ ಹರೆಯದ ಬುರ್ಹಾನ್‌ ವಾನಿ ಶುಕ್ರವಾರ ಸಂಜೆ ಪೊಲೀಸ್‌-ಆರ್ಮಿಯ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಎನ್‌ಕೌಂಟರ್‌ಗೆ ಬಲಿಯಾಗಿದ್ದನು. ಆ ಬಳಿಕ ಜಮ್ಮು -ಕಾಶ್ಮೀರದಲ್ಲಿ ಹಿಂಸಾಚಾರ ಆರಂಭಗೊಂಡು ಪರಿಸ್ಥಿತಿಯ ನಿಯಂತ್ರಣಕ್ಕೆ ಕರ್ಪ್ಯೂ ವಿಧಿಸಲಾಗಿತ್ತು.ಮೊಬೈಲ್‌ ಅಂತರ್ಜಾಲ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. . ಈ ನಡುವೆಯೂ ನಡೆದ ವನಿ ಮೃತದೇಹದ ಅಂತ್ಯ ಸಂಸ್ಕಾರದ ವೇಳೆ ಲಕ್ಷಾಂತರ ಮಂದಿ ಭಾಗವಹಿಸಿದ್ದರು. ಓರ್ವ ಉಗ್ರನ ಅಂತ್ಯ ಕ್ರಿಯೆಯಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ಭಾಗವಹಿಸಿರುವುದು ಜಮ್ಮು ಮತ್ತು ಕಾಶ್ಮೀರದ ಇತಿಹಾಸದಲ್ಲೇ ಪ್ರಥಮವಾಗಿದೆ ಎಂದು ಮೂಲಗಳು ತಿಳಿಸಿವೆ.
ವಾನಿ ಮೃತದೇಹದ ಅಂತ್ಯ ಸಂಸ್ಕಾರದ ವೇಳೆ 21 ಕುಶಾಲ ತೋಪುಗಳು ಮೊಳಗಿದವು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News