ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಪ್ರಶಾಂತ್ ಪಕ್ಕಳ ನೇಮಕ
Update: 2016-07-10 10:06 IST
ವಿಟ್ಲ, ಜು.10: ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನಾಗಿ ಮಲಾರಬೀಡು ನಿವಾಸಿ ಪ್ರಶಾಂತ್ ಪಕ್ಕಳ ಎಂಬವರನ್ನು ನೇಮಕಗೊಳಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಅವರ ಶಿಫಾರಸ್ಸಿನ ಮೇರೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ ಅವರು ಈ ನೇಮಕ ಮಾಡಿ ಆದೇಶ ನೀಡಿದ್ದಾರೆ.