ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ; ಬ್ಯಾಲೆಸ್ಟಿಕ್ ತಜ್ಞರ ಭೇಟಿ
Update: 2016-07-10 11:04 IST
ಮಡಿಕೇರಿ, ಜು10: ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಇಂದು ಬ್ಯಾಲೆಸ್ಟಿಕ್ ತಜ್ಞರು ಗಣಪತಿ ಅತ್ಮಹತ್ಯೆ ಮಾಡಿಕೊಂಡ ವಿನಾಯಕ ಲಾಡ್ಜ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಗಣಪತಿ ಎರಡು ಸುತ್ತು ಗುಂಡು ಹಾರಿಸಿದ್ದರು. ಇದರ ಬಗ್ಗೆ ತಂಡ ಪರಿಶೀಲನೆ ನಡೆಸಿದೆ.
ಮರಣೋತ್ತರ ಪರೀಕ್ಷೆ ನಡೆಸಿರುವ ಕೊಡಗು ಜಿಲ್ಲಾಸ್ಪತ್ರೆಗೆ ಭೇಟಿ ನೀಡಲಿರುವ ತಂಡ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರಿಂದ ಮಾಹಿತಿ ಪಡೆಯಲಿದೆ. ಗಣಪತಿ ಸಾಯುವ ಸ್ವಲ್ಪ ಹೊತ್ತಿನ ಮುನ್ನ ಯಾರನ್ನು ಭೇಟಿಯಾಗಿದ್ದರೂ, ಅವರನ್ನು ಭೇಟಿಯಾಗಿ ಮಾಹಿತಿ ಪಡೆಯಲಿದ್ದಾರೆ ಎಂದು ತಿಳಿದು ಬಂದಿದೆ.