ಬಂಟ್ವಾಳ ಕಾರ್ಯ ನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದ ಪ್ರಯುಕ್ತ ಕೊಲಾಜ್ ಕಲಾಕ್ರತಿಗಳ ಪ್ರದರ್ಶನ :ರಮಾನಾಥ ರೈ ಭೇಟಿ
Update: 2016-07-10 20:59 IST
ಬಂಟ್ವಾಳ ಕಾರ್ಯ ನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದ ಪ್ರಯುಕ್ತ ಬಿ.ಸಿ.ರೋಡ್ ಪ್ರೆಸ್ ಕ್ಲಬ್ ನಲ್ಲಿ ಶನಿವಾರದಿಂದ ಮೂರು ದಿವಸಗಳ ಕಾಲ ಹಮ್ಮಿಕೊಂಡಿರುವ ಮಂಚಿ ಸರಕಾರಿ ಪ್ರೌಢ ಶಾಲೆಯ ಮಕ್ಕಳ ಕೊಲಾಜ್ ಕಲಾಕ್ರತಿಗಳ ಪ್ರದರ್ಶನವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಭೇಟಿ ನೀಡಿ ವೀಕ್ಷಿಸಿ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಡಿಸಿದರು. ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೌನೇಶ್ ವಿಶ್ವಕರ್ಮ, ಜಿಪಂ ಸದಸ್ಯ ಎಂ.ಎಸ್.ಮುಹಮ್ಮದ್, ಪುರಸಭಾ ಅಧ್ಯಕ್ಷ ರಾಮಕೃಷ್ಣ ಆಳ್ವ, ಮುಖ್ಯಧಿಕಾರಿ ಸುಧಾಕರ್ ಭಟ್, ಪತ್ರಕರ್ತರಾದ ವೆಂಕಟೇಶ್ ಬಂಟ್ವಾಳ, ಸಂದೀಪ್ ಸಾಲ್ಯಾನ್ ಮೊದಲಾದವರು ಉಪಸ್ಥಿತರಿದ್ದರು.