ಕುಂತೂರು: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಪಲ್ಟಿ

Update: 2016-07-11 12:07 GMT

ಕಡಬ, ಜು.11: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನವೊಂದು ಮಗುಚಿ ಬಿದ್ದಿರುವ ಘಟನೆ ಕುಂತೂರು ತಿರುವಿನಲ್ಲಿ ಸೋಮವಾರ ಸಂಜೆ ಸಂಭವಿಸಿದೆ.

ಕಡಬ ಕಡೆಗೆ ತೆರಳುತ್ತಿದ್ದ ಪಿಕಪ್ ವಾಹನವು ಚಾಲಕನ ನಿಯಂತ್ರಣ ತಪ್ಪಿರಸ್ತೆ ಬದಿಯ ಹೊಂಡಕ್ಕೆ ಮಗುಚಿ ಬಿದ್ದಿದೆ.

ಪಿಕಪ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News