ಕರ್ನಿರೆ- ಏಸ್ ಸಿವಿಲ್ ಸರ್ವಿಸ್ ಅಕಾಡೆಮಿಯಿಂದ ನಾಗರಿಕ ಸೇವಾ ಪರೀಕ್ಷೆಗಳಿಗೆ ಉಚಿತ ತರಬೇತಿ
Update: 2016-07-12 15:56 IST
ಮಂಗಳೂರು,ಜು.12: ನಗರದ ಕರ್ನಿರೆ ಏಸ್ ಸಿವಿಲ್ ಸರ್ವಿಸ್ ಅಕಾಡೆಮಿಯಿಂದ ಐಎಎಸ್, ಕೆಎಎಸ್ ಮೊದಲಾದ ಕೇಂದ್ರ ಹಾಗೂ ರಾಜ್ಯ ಸರಕಾರದ ನಾಗರಿಕ ಸೇವಾ ಹುದ್ದೆಗಳಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗ ಹಾಜರಾಗಲು ಬಯಸುವ ಮುಸ್ಲಿಂ ಸಮುದಾಯದ ಅರ್ಹ ಅಭ್ಯರ್ಥಿಗಳಿಗೆ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಜುಲೈ 17ರಂದು ಬೆಳಗ್ಗೆ 10 ಗಂಟೆಗೆ ಕಂಕನಾಡಿ ಬಾಲಿಕಾಶ್ರಮ ರಸ್ತೆಯಲ್ಲಿರುವ ಜೆಎಫ್ ಸಮುದಾಯ ಭವನದಲ್ಲಿ ಉಚಿತ ಮಾಹಿತಿ ಮತ್ತು ಮಾರ್ಗದರ್ಶನ ಶಿಬಿರವನ್ನು ಆಯೋಜಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು 7090109997 ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಅಥವಾ ವಾಟ್ಸ್ಆಪ್ ಮೂಲಕ ಹೆಸರು ನೋಂದಾಯಿಸಿ ಶಿಬಿರದ ಪ್ರಯೋಜನ ಪಡೆಯಬಹುದು ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.