×
Ad

ಪುತ್ತೂರು: ಜ್ವರದಿಂದ ಬಳಲುತ್ತಿದ್ದ ವ್ಯಕ್ತಿ ಮೃತ್ಯು

Update: 2016-07-12 20:22 IST

ಪುತ್ತೂರು, ಜು.12: ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಅರಿಯಡ್ಕ ಗ್ರಾಮದ ಕೌಡಿಚ್ಚಾರ್ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ.

ಮೂಲತ ತಮಿಳುನಾಡು ನಿವಾಸಿ ಕಳೆದ ಮೂರು ತಿಂಗಳಿನಿಂದ ಕೌಡಿಚ್ಚಾರ್‌ನಲ್ಲಿರುವ ತನ್ನ ಸಹೋದರನ ಮನೆಯಲ್ಲಿ ವಾಸವಾಗಿರುವ ಸದಾಶಿವ (55) ಮೃತಪಟ್ಟ ವ್ಯಕ್ತಿ.

ಕಳೆದ ಒಂದು ವಾರದಿಂದ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಜ್ವರದಿಂದ ಬಳಲುತ್ತಿದ್ದ ಅವರಿಗೆ ಚಿಕಿತ್ಸೆಯನ್ನು ನೀಡಲಾಗಿತ್ತು. ಆದರೆ ಸೋಮವಾರ ಸಂಜೆ ಅವರು ಹಠಾತ್ತನೆ ಕುಸಿದು ಬಿದ್ದು ಪ್ರಜ್ಞೆ ಕಳೆದುಕೊಂಡಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಮೃತರು ಪತ್ನಿ, ತಂದೆ ತಾಯಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಘಟನೆಯ ಕುರಿತು ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News