ವಿಷ ಸೇವಿಸಿ ಅಸ್ವಸ್ಥಗೊಂಡ ವ್ಯಕ್ತಿ ಮೃತ್ಯು
Update: 2016-07-12 23:33 IST
ಸುಬ್ರಹ್ಮಣ್ಯ, ಜು.12: ವಿಷ ಪದಾರ್ಥ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ಇಜ್ಜಿನಡ್ಕ ನಿವಾಸಿ ತಿಮ್ಮಯ್ಯ (32) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾರೆ.
ಐನೆಕಿದು ಗ್ರಾಮದ ಇಜ್ಜಿನಡ್ಕದವರಾದ ತಿಮ್ಮಯ್ಯ ಎರಡು ದಿನಗಳ ಹಿಂದೆ ಇಲಿ ಪಾಷಾಣ ಪದಾರ್ಥ ಸೇವಿಸಿದ್ದರು. ಇದರಿಂದ ಅಸ್ವಸ್ಥಗೊಂಡಿದ್ದ ಅವರನ್ನು ಸ್ಥಳಿಯರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ.
ಮೃತರು ಅವಿವಾಹಿತರಾಗಿದ್ದು, ಮನೆಯಲ್ಲಿ ಒಂಟಿಯಾಗಿ ಜೀವನ ಸಾಗಿಸುತ್ತಿದ್ದರು ಎನ್ನಲಾಗಿದೆ. ಜೀವನ ದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿ ರಬಹುದೆಂದು ಶಂಕಿಸಲಾಗಿದೆ. ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.