×
Ad

ಇಂದು ಪ್ರತಿಭಟನೆ

Update: 2016-07-12 23:42 IST

ಉಡುಪಿ, ಜು.12: ಮಂಗಳೂರು ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸ್ಥಾನದಲ್ಲಿರುವ ಗೃಹಸಚಿವ ಕೆ.ಜೆ. ಜಾರ್ಜ್‌ರನ್ನು ಸಂಪುಟದಿಂದ ಕೈಬಿಡುವಂತೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಜು.13ರ ಸಂಜೆ 4ಕ್ಕೆ ಉಡುಪಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ಹಮ್ಮಿಕೊಂಡಿದೆ.
ಬಳಿಕ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ನೇತೃತ್ವದಲ್ಲಿ ಮಣಿಪಾಲಕ್ಕೆ ತೆರಳಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಶ್ರೀಶ ನಾಯಕ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News