×
Ad

ವಿಪಕ್ಷಗಳಿಂದ ಸರಕಾರಕ್ಕೆ ಕೆಟ್ಟ ಹೆಸರು ತರುವ ಸಂಚು: ಇಬ್ರಾಹೀಂ ಕೋಡಿಜಾಲ್

Update: 2016-07-13 15:49 IST

ಮಂಗಳೂರು,ಜು.13: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ವಿಚಾರವನ್ನಿಟ್ಟುಕೊಂಡು ವಿಪಕ್ಷಗಳು ಸರಕಾರಕ್ಕೆ ಕೆಟ್ಟ ಹೆಸರು ತರುವ ಸಂಚು ಮಾಡಿವೆ ಎಂದು ದ.ಕ ಜಿಲ್ಲಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್ ಹೇಳಿದರು.

ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಪಕ್ಷಗಳು ಪ್ರಜಾಪ್ರಭುತ್ವ ವಿರೋಧಿಯಾಗಿ ವರ್ತಿಸುತ್ತಿದೆ. ಅಧಿವೇಶನಕ್ಕೆ ಅಡ್ಡಿಯನ್ನುಂಟು ಮಾಡುತ್ತಿರುವುದರಿಂದ ಕೋಟ್ಯಾಂತರ ರೂ. ನಷ್ಟವುಂಟಾಗಿದೆ ಎಂದು ತಿಳಿಸಿದರು.

ವಿಧಾನಸಭೆ ಮತ್ತು ವಿಧಾನಪರಿಷತ್ ನಡೆಯದಂತೆ ಮಾಡುವುದು ಭೂಷಣವಲ್ಲ. ಯಡಿಯೂರಪ್ಪನವರು ಮತ್ತೆ ಅಧಿಕಾರಕ್ಕೇರುವ ಕನಸು ಕಾಣುತ್ತಿದ್ದಾರೆ. ಆದರೆ ಅವರ ಕನಸು ಈಡೇರುವುದಿಲ್ಲ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕ ಜೆ.ಆರ್.ಲೋಬೊ, ಮನಪಾ ಮೇಯರ್ ಹರಿನಾಥ್, ಪ್ರಮುಖರಾದ ಶಶಿಧರ ಹೆಗ್ಡೆ, ಅಶ್ರ್ ಕೆ., ಪದ್ಮನಾಭ ನರಿಂಗಾನ, ಶಾಹುಲ್ ಹಮೀದ್, ನವೀನ್ ಡಿಸೋಜ, ಆಶಾ ಡಿಸಿಲ್ವಾ, ಲ್ಯಾನ್ಸ್‌ಲೋಟ್ ಪಿಂಟೊ, ಸಫಿ ಅಹ್ಮದ್, ಉಮೇಶ್ ದೇವಾಡಿಗ, ವಿಶ್ವಾಸ್ ಕುಮಾರ್ ದಾಸ್, ಬಾಲಕೃಷ್ಣ ಶೆಟ್ಟಿ, ಟಿ.ಕೆ.ಸುಧೀರ್, ಜೆಸಿಂತಾ ಆಲ್ಪ್ರೆಡ್, ಸದಾಶಿವ ಅಮೀನ್, ನಝೀರ್ ಬಜಾಲ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News