ಪುತ್ತೂರು: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಸೆರೆ
Update: 2016-07-13 18:57 IST
ಪುತ್ತೂರು, ಜು.13: ಪುತ್ತೂರು ನಗರದ ಹೊರವಲಯದ ಮುಕ್ರಂಪಾಡಿ ಎಂಬಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸವಣೂರಿನ ಚಾಪಳ್ಳ ನಿವಾಸಿ ಮುಹಮ್ಮದ್ ಶಾಕೀರ್, ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ನಿವಾಸಿ ತಾರನಾಥ ಎಂದು ಗುರುತಿಸಲಾಗಿದೆ.
ಖಚಿತ ವರ್ತಮಾನದ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಗಳಿಂದ 17 ಗ್ರಾಂ ಗಾಂಜಾ ಹಾಗೂ ಎರಡು ಮೊಬೈಲ್ ಮತ್ತು 2,290 ರೂ.ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.