ವಿಂಡೀಸ್ ತಂಡಕ್ಕೆ ಕುಮಿನ್ಸ್ ಸೇರ್ಪಡೆ
Update: 2016-07-13 23:41 IST
ಸೈಂಟ್‌ಜಾನ್ಸ್, ಜು.13: ಮುಂಬರುವ ಭಾರತ ವಿರುದ್ಧ ಟೆಸ್ಟ್ ಸರಣಿಯಲ್ಲಿ ಜೆರೊಮ್ ಟೇಲರ್ ಬದಲಿಗೆ ಹೊಸ ವೇಗದ ಬೌಲರ್ ಮಿಗುಯೆಲ್ ಕುಮಿನ್ಸ್ ಆಡಲಿದ್ದಾರೆ ಎಂದು ವೆಸ್ಟ್‌ಇಂಡೀಸ್ ಕ್ರಿಕೆಟ್ ಮಂಡಳಿ ಬುಧವಾರ ಹೇಳಿದೆ.
ಟೇಲರ್ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾಗಿರುವ ಹಿನ್ನೆಲೆಯಲ್ಲಿ ಕುಮಿನ್ಸ್‌ರನ್ನು ಬದಲಿ ಆಟಗಾರನಾಗಿ ಆಯ್ಕೆ ಮಾಡಲಾಗಿದೆ.
ಈ ವರ್ಷಾರಂಭದಲ್ಲಿ ಆಸ್ಟ್ರೇಲಿಯ ವಿರುದ್ಧದ ಸರಣಿಯಲ್ಲಿ ಕುಮಿನ್ಸ್ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿದ್ದರು. ಆದರೆ, ಸರಣಿಯಲ್ಲಿ ಯಾವುದೇ ಪಂದ್ಯವನ್ನು ಆಡಿರಲಿಲ್ಲ. 2003ರಲ್ಲಿ ಶ್ರೀಲಂಕಾದ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಿದ್ದ ಟೇಲರ್ ಸೀಮಿತ ಓವರ್ ಕ್ರಿಕೆಟ್‌ನಲ್ಲಿ ಆಡಲಿದ್ದಾರೆ.