×
Ad

ಮಂಗಳೂರು ಜೈಲಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Update: 2016-07-13 23:48 IST

ಮಂಗಳೂರು, ಜು.13: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಂಗಳೂರು ವಕೀಲರ ಸಂಘ, ಜಿಲ್ಲಾ ಕಾರಾಗೃಹದ ವತಿಯಿಂದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಬಂಧಿಗಳಿಗಾಗಿ ವಿಚಾರಣಾಧೀನ ಬಂಧಿಗಳ ಹಕ್ಕುಗಳು ಮತ್ತು ಮನವಿ ಚೌಕಾಸಿ (ಪ್ಲೀ ಬಾರ್ಗೈನಿಂಗ್) ಬಗ್ಗೆ ಕಾನೂನು ಅರಿವು ಕಾರ್ಯಕ್ರಮ ನಡೆಯಿತು.
 3ನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ಎಚ್. ಪುಷ್ಪಾಂಜಲಿದೇವಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರಾಗೃಹದ ಅಧೀಕ್ಷಕ ವಿ. ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ನ್ಯಾಯವಾದಿ ರವೀಂದ್ರ ಮುನ್ನಿಪಾಡಿ ‘ವಿಚಾರಣಾಧೀನ ಬಂಧಿಗಳ ಹಕ್ಕುಗಳು ಮತ್ತು ಮನವಿ ಚೌಕಾಸಿ’ (ಪ್ಲೀ ಬಾರ್ಗೈನಿಂಗ್) ಬಗ್ಗೆ ಮಾಹಿತಿ ನೀಡಿದರು. ಅತಿಥಿಗಳಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಲ್ಲನಗೌಡ, 2ನೆ ಜೆಎಂಎಫ್‌ಸಿ ನ್ಯಾಯಾಧೀಶ ಸಂತೋಷ್ ಎಸ್. ಕುಂದರ್, 3ನೆ ಜೆಎಂಎಫ್‌ಸಿ ನ್ಯಾಯಾಧೀಶ ಮಂಜುನಾಥ ಆರ್., ವಕೀಲರ ಸಂಘದ ಅಧ್ಯಕ್ಷ ಎಸ್.ಪಿ. ಚಂಗಪ್ಪ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News