16 ರಂದು ದಿನೇಶ್ ಗುಂಡೂರಾವ್ ಕಾಂಗ್ರೆಸ್ ಕಛೇರಿಗೆ ಭೇಟಿ
Update: 2016-07-14 15:27 IST
ಮಂಗಳೂರು,ಜು.14: ಕರ್ನಾಟಕ ಪ್ರದೇಶ ಕಾಂಗ್ರೆಸ್‌ನ (ಕೆಪಿಸಿಸಿ)ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಜು.16ರಂದು ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿದ್ದಾರೆ. ಂದು ಸಂಜೆ 3 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಬಿ. ರಮಾನಾಥ ರೈಗಳ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕಾರಿಣಿ ಸಭೆಯಲ್ಲಿ ದಿನೇಶ್ ಗುಂಡೂರಾವ್‌ರವರು ಭಾಗವಹಿಸಿ ಮಾತನಾಡಲಿರುವರು. ಸಭೆಯಲ್ಲಿ ಜಿಲ್ಲೆಯ ಎಲ್ಲಾ ಶಾಸಕರು, ಎ.ಐ.ಸಿ.ಸಿ ಸದಸ್ಯರು, ಕೆ.ಪಿ.ಸಿ.ಸಿ ಸದಸ್ಯರು, ಜಿಲ್ಲಾ ಪಂಚಾಯತ್ ಸದಸ್ಯರು, ಕಾರ್ಪೋರೇಟರ್‌ಗಳು, ಜಿಲ್ಲಾ ಕಾಂಗ್ರೆಸ್ ಪದಾಕಾರಿಗಳು, ಜಿಲ್ಲಾ ಕಾಂಗ್ರೆಸ್ ವಿವಿಧ ಘಟಕದ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ತಾಲೂಕು ಪಂಚಾಯತ್ ಅಧ್ಯಕ್ಷರು ಭಾಗವಹಿಸಲಿರುವರು.