×
Ad

157 ಕೋಟಿ ರೂ. ಕಾರ್ಯಕ್ರಮ ಅನುಷ್ಠಾನ: ವೆಂಕಟರಾವ್ ಘೋರ್ಪಡೆ

Update: 2016-07-14 22:32 IST

ಕಾರವಾರ, ಜು.14: ಡಾ. ನಂಜುಂಡಪ್ಪವರದಿ ಶಿಫಾರಸಿನಲ್ಲಿ ಗುರುತಿಸಲಾಗಿರುವ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಇದುವರೆಗೆ ಒಟ್ಟು 157 ಕೋಟಿ ರೂ. ಮೊತ್ತದ ಬೃಹತ್‌ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಡಾ.ನಂಜುಂಡಪ್ಪಸಮಿತಿ ವರದಿ ಅನುಷ್ಠಾನ ಉನ್ನತಾಧಿಕಾರ ಸಮಿತಿ ಅಧ್ಯಕ್ಷ ವೆಂಕಟರಾವ್ ಘೋರ್ಪಡೆ ತಿಳಿಸಿದ್ದಾರೆ.

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಶೇಷ ಅಭಿವೃದ್ಧಿ ಯೋಜನೆ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡುತ್ತಿದ್ದರು.

 ಡಾ.ನಂಜುಂಡಪ್ಪವರದಿ ಆಧಾರದಲ್ಲಿ ರಾಜ್ಯದ 114 ತಾಲೂಕುಗಳನ್ನು ಅತ್ಯಂತ ಹಿಂದುಳಿದ ತಾಲೂಕುಗಳೆಂದು ಗುರುತಿಸಲಾಗಿದೆ. ಇದರಲ್ಲಿ ಜಿಲ್ಲೆಯ ಜೊಯಿಡಾ, ಭಟ್ಕಳ, ಅಂಕೋಲಾ ಮತ್ತು ಸಿದ್ಧಾಪುರ ತಾಲೂಕುಗಳು ಸೇರಿವೆ. ಈ ತಾಲೂಕುಗಳಲ್ಲಿ ವಿವಿಧ ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೊಳ್ಳಲು ಕಳೆದ 8 ವರ್ಷಗಳ ಅವಧಿಯಲ್ಲಿ ಒಟ್ಟು 170.97 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಇದರಲ್ಲಿ 157.55 ಕೋಟಿ ರೂ. ವೆಚ್ಚ ಮಾಡಲಾಗಿದೆ. ವಿಶೇಷವಾಗಿ ಗುರುತಿಸಲಾದ ತಾಲೂಕುಗಳ ಅಭಿವೃದ್ಧಿ ಗಮನದಲ್ಲಿಟ್ಟು ಈ ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿಶೇಷ ಅಭಿವೃದ್ಧಿಗೆ ಸಮಗ್ರ ರೂಪುರೇಷೆ ಸಿದ್ಧಪಡಿಸಿ ಅನುಷ್ಠಾನಗೊಳಿಸಲು ಸರಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದರು. ವಿಶೇಷ ಅಭಿವೃದ್ಧಿ ಯೋಜನೆಯಡಿ ನಿರ್ದಿಷ್ಟ ಮಾರ್ಗಸೂಚಿಯನ್ನು ಅನುಸರಿಸದೆ, ಅನುದಾನ ದುರ್ಬಳಕೆ ಮಾಡಲಾಗಿದೆ. ಕಾಮಗಾರಿ ಸ್ಥಳದಲ್ಲಿ ಕಾಮಗಾರಿ ವಿವರಗಳ ಬಗ್ಗೆ ಫಲಕ ಹಾಕಬೇಕು ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಮಪ್ರಸಾದ್ ಮನೋಹರ್, ಅಪರ ಡಿಸಿ ಎಚ್. ಪ್ರಸನ್ನ ಮತ್ತಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News