×
Ad

ಸಚಿವ ಪ್ರಮೋದ್ ಮಧ್ವರಾಜ್ ಪ್ರವಾಸ

Update: 2016-07-14 23:49 IST

ಉಡುಪಿ, ಜು.14: ಮೀನುಗಾರಿಕಾ ಸಚಿವ ಪ್ರಮೋದ್ ಮಧ್ವರಾಜ್ ಜು. 15ರಂದು ಉಡುಪಿಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 9:30ಕ್ಕೆ ಮಣಿಪಾಲದ ಕಂಟ್ರಿ ಇನ್ ಹೋಟೆಲ್ ಬಳಿ ಅಂಬಾಗಿಲು-ಮಣಿಪಾಲ- ಉದ್ಯಾವರ ಚತುಷ್ಪಥ ರಸ್ತೆ ಕಾಮಗಾರಿಗೆ ಶಿಲಾನ್ಯಾಸ, 10ಕ್ಕೆ ಉಡುಪಿ ನಗರಸಭೆ ಎದುರಿನ ಗಾಂಧಿ ಶತಾಬ್ಧಿ ಶಾಲೆಯಲ್ಲಿ ಮಕ್ಕಳಿಗೆ ವಿವಿಧ ಸೌಲಭ್ಯಗಳ ವಿತರಣೆ, 10:30ಕ್ಕೆ ಕಾರ್ಪೊರೇಶನ್ ಬ್ಯಾಂಕ್ ಪ್ರಾದೇಶಿಕ ಕಚೇರಿಗೆ ಭೇಟಿ, 11ರಿಂದ 1ರವರೆಗೆ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಸಂಜೆ 4ಕ್ಕೆ ಕಿದಿಯೂರಿನಲ್ಲಿ ಜಿಮ್ ಕೇಂದ್ರ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News