ಓಮ್ನಿ ಢಿಕ್ಕಿ: ಬೈಕ್ ಸವಾರ ಗಂಭೀರ
Update: 2016-07-16 19:17 IST
ಉಪ್ಪಿನಂಗಡಿ, ಜು.16: ಬೈಕ್ ಹಾಗೂ ಓಮ್ನಿ ಕಾರಿನ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಶನಿವಾರ 34ನೆ ನೆಕ್ಕಿಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಆದರ್ಶ ನಗರ ಎಂಬಲ್ಲಿ ಶನಿವಾರ ಸಂಭವಿಸಿದೆ.
ಘಟನೆಯಿಂದ ಕಲ್ಲೇರಿ ನಿವಾಸಿ ಕೃಷ್ಣ ಭಟ್ ಗಂಭೀರ ಗಾಯಗೊಂಡಿದ್ದಾರೆ. ಇವರು ಉಪ್ಪಿನಂಗಡಿಯಿಂದ ಪುತ್ತೂರು ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭ ಪುತ್ತೂರಿನಿಂದ ಉಪ್ಪಿನಂಗಡಿ ಕಡೆ ಬರುತ್ತಿದ್ದ ಓಮ್ನಿ ಕಾರಿನ ಮಧ್ಯೆ ಆದರ್ಶ ನಗರ ಬಳಿ ಈ ಅಪಘಾತ ಸಂಭವಿಸಿದೆ.
ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.