×
Ad

ಪ್ರಾಥಮಿಕ ಶಾಲಾ ನೂತನ ಕಟ್ಟಡಕ್ಕೆ ಭೂಮಿ ಪೂಜೆ

Update: 2016-07-17 23:01 IST

ಮಡಿಕೇರಿ, ಜು.17 : ರಾಷ್ಟ್ರದ ಅಭಿವೃದ್ಧಿಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳು ಮಹತ್ತರ ಪಾತ್ರವಹಿಸಲಿವೆ ಎಂದು ಬಿಇಎಲ್ ಸಂಸ್ಥೆಯ ಮಾನವ ಸಂಪನ್ಮೂಲ ನಿರ್ದೇಶಕ ಎಂ.ಎಲ್. ಷಣ್ಮುಖ ಅಭಿಪ್ರಾಯಿಸಿದ್ದಾರೆ.

ನಗರದ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಪ್ರಾಥಮಿಕ ಶಾಲಾ ಕಟ್ಟಡ, ನಿರ್ಮಾಣಕ್ಕೆ ಭಾನುವಾರ ಭೂಮಿಪೂಜೆ ನೆರವೇರಿಸಿ, ಬಳಿಕ ನಡೆದ ಸಭಾಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಸರಕಾರ ಮತ್ತು ಸರಕಾರೇತರ ಸಂಸ್ಥೆಗಳು ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತಾದರೆ ದೇಶ ಶೀಘ್ರ ಬಡತನ ಮುಕ್ತ ರಾಷ್ಟ್ರವಾಗಿ ಮಾರ್ಪಡಲಿದೆ ಎಂದು ಹೇಳಿದರು.

 ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಿ.ಆರ್. ಬಸವರಾಜು, ಪಂ ಸಿಇಒ ಚಾರುಲತಾ ಸೋಮಲ್, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಧರನ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಯಮುನಾ, ಬಿಇಎಲ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸುಕುಮಾರ್, ಕೆ.ಪಿ.ಘರ್, ಕೆ.ಎಂ. ಶಿವಕುಮಾರ ಮತ್ತಿತರರು ಉಪಸ್ಥಿತರಿದ್ದರು,.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News