ರಾಜ್ಯಸಭಾ ಸದಸ್ಯೆಯಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Update: 2016-07-18 10:02 GMT

ಹೊಸದಿಲ್ಲಿ, ಜು.18: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೂ ಮುನ್ನ ರಾಜ್ಯಸಭೆಗೆ ಆಯ್ಕೆಯಾದ ನೂತನ ಸದಸ್ಯರು ಪ್ರಮಾಣವಚನ ಸ್ವೀಕರಿಸಿದರು.

ಈ ಪೈಕಿ ಈ ಬಾರಿ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಖಾತೆಯ ರಾಜ್ಯ ಸಚಿವೆ ನಿರ್ಮಲಾ ಸೀತಾರಾಮನ್ ಕನ್ನಡ ಭಾಷೆಯಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಗಮನ ಸೆಳೆದರು.

ನಿರ್ಮಲಾ ಸೀತಾರಾಮನ್ ಅವರು ಕನ್ನಡ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಚಿವರ ಕನ್ನಡ ಪರ ಕಾಳಜಿ ಕೇವಲ ಪ್ರಮಾಣ ವಚನ ಸ್ವೀಕಾರಕ್ಕೆ ಮಾತ್ರ ಸೀಮಿತವಾಗದಿರಲಿ, ಕನ್ನಡಿಗರ ಪರವಾಗಿ ರಾಜ್ಯಸಭೆಯಲ್ಲಿ ಧ್ವನಿಯೆತ್ತಲಿ ಎನ್ನುವ ಆಗ್ರಹವು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News