ಮಂಜೇಶ್ವರ: ನಿಷೇದಿತ ತಂಬಾಕು ಉತ್ಪನ್ನ ಹಾಗೂ ಮದ್ಯ ವಶ
Update: 2016-07-18 19:03 IST
ಮಂಜೇಶ್ವರ, ಜು.18: ಕರ್ನಾಟಕ ಸಾರಿಗೆ ಬಸ್ಸಿನಲ್ಲಿ ಮಂಗಳೂರಿನಿಂದ ಕಾಸರಗೋಡು ಕಡೆ ಸಾಗಿಸಲಾಗುತ್ತಿದ್ದ ಸುಮಾರು 40 ಸಾವಿರ ರೂ. ವೌಲ್ಯದ ನಿಷೇಧಿತ ತಂಬಾಕು ಉತ್ಪನ್ನ ಹಾಗೂ ಮದ್ಯವನ್ನು ಅಬಕಾರಿ ಪೊಲೀಸರು ವಾಮಂಜೂರು ಚೆಕ್ ಪೋಸ್ಟ್‌ನಲ್ಲಿ ಸೋಮವಾರ ವಶಪಡಿಸಿಕೊಂಡಿದ್ದಾರೆ.
ಬಸ್ಸಿನ ಹಿಂಭಾಗದ ಸೀಟಿನಡಿಯಲ್ಲಿ ಇರಿಸಲಾಗಿದ್ದ ಚೀಲವೊಂದರಲ್ಲಿ ಮದ್ಯ ಹಾಗೂ ನಿಷೇಧಿತ ತಂಬಾಕು ಉತ್ಪನ್ನ ಪತ್ತೆಯಾಗಿದೆ. ಈ ಸಂಬಂಧ ಯಾರನ್ನೂ ಸೆರೆ ಹಿಡಿಯಲು ಸಾಧ್ಯವಾಗಿಲ್ಲ.
ಇತ್ತೀಚಿನ ದಿನಗಳಲ್ಲಿ ವ್ಯಾಪಕವಾಗಿ ಮದ್ಯ ಹಾಗೂ ತಂಬಾಕು ಉತ್ಪನ್ನಗಳು ಕೇರಳಕ್ಕೆ ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ತಪಾಸಣಾ ಕೇಂದ್ರಗಳಲ್ಲಿ ತಪಾಸಣೆಯನ್ನು ಬಿಗಿಗೊಳಿಸಲಾಗಿರುವುದಾಗಿ ಅಧಿಕಾರಿಗಳು ಪತ್ರಿಕೆಗೆ ತಿಳಿಸಿದ್ದಾರೆ.
ವಶಪಡಿಸಿಕೊಳ್ಳಲಾದ ಮದ್ಯವನ್ನು ಮಂಜೇಶ್ವರ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.