10 ರೂ.ಗೆ 20 ಲೀಟರ್ ಶುದ್ಧ ಕುಡಿಯುವ ನೀರು!

Update: 2016-07-19 13:29 GMT

ಮಂಗಳೂರು, ಜು.19: ಮಂಗಳೂರು ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಸಾರ್ವಜನಿಕರಿಗೆ ಶುದ್ಧ ಕುಡಿಯವ ನೀರನ್ನು ಪೂರೈಸುವ ನಿಟ್ಟಿನಲ್ಲಿ 25 ಘಟಕಗಳನ್ನು ಆರಂಭಿಸಲಾಗುವುದು. ಈ ಘಟಕಗಳ ಮೂಲಕ ಆಸುಪಾಸಿನ ಮನೆಗಳವರಿಗೆ ದಿನವೊಂದಕ್ಕೆ ತಲಾ 20 ಲೀಟರ್ ಶುದ್ಧ ನೀರು 10 ರೂ.ಗಳಲ್ಲಿ ಲಭ್ಯವಾಗಲಿದೆ ಎಂದು ರಾಜ್ಯದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಯು.ಟಿ.ಖಾದರ್ ತಿಳಿಸಿದರು.

ಜಿಲ್ಲೆಯಲ್ಲಿ ಪ್ರಾಥಮಿಕ ಹಂತದಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದೆ ಜಿಲ್ಲೆಯಾದ್ಯಂತ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಎಲ್ಲರಿಗೂ ಶುದ್ಧೀಕರಿಸಿದ ಕುಡಿಯುವ ನೀರನ್ನು ಒದಗಿಸುವ ಉದ್ದೇಶದಿಂದ ಈ ಘಟಕಗಳನ್ನು ಸ್ಥಾಪಿಸಲಾಗುವುದು. ಮಂಗಳೂರು ವಿಧಾನಸಭಾಕ್ಷೇತ್ರದಲ್ಲಿ ಖಾಸಗಿ- ಸಾರ್ವಜನಿಕ ಸಹಭಾಗಿತ್ವ, ಕೆಆರ್‌ಐಡಿಎಲ್ ಹಾಗೂ ಲ್ಯಾಂಡ್ ಆರ್ಮಿ ಮೂಲಕ ಘಟಕಗಳನ್ನು ಸ್ಥಾಪಿಸಲು ಸ್ಛಳಗಳನ್ನು ಗುರುತಿಸಲಾಗಿದೆ. ಕೈರಂಗಳ ಅಥವಾ ಬಾಳೆಪುಣಿಯಲ್ಲಿ ಆರಂಭದಲ್ಲಿ ಒಂದು ತಿಂಗಳಲ್ಲಿ ಐದು ಘಟಕಗಳನ್ನು ಸ್ಥಾಪಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಸಚಿವ ಖಾದರ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News