×
Ad

ಕಡಬ: ಅಕ್ರಮ ಮದ್ಯದಂಗಡಿಗೆ ದಾಳಿ

Update: 2016-07-19 20:50 IST

 ಕಡಬ, ಜು.19: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ದಿನಸಿ ಅಂಗಡಿಯೊಂದಕ್ಕೆ ಪೊಲೀಸರು ದಾಳಿ ನಡೆಸಿದ ಘಟನೆ ಕಡಬ ಠಾಣಾ ವ್ಯಾಪ್ತಿಯ ಕಾಣಿಯೂರು ಏಲಡ್ಕ ಎಂಬಲ್ಲಿ ಸಂಭವಿಸಿದೆ.

ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿ ಚಂದ್ರಶೇಖರ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅಕ್ರಮವಾಗಿ ದಾಸ್ತಾನಿರಿಸಲಾಗಿದ್ದ 57 ಬಾಟಲ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.

ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ದೂರಿನ ಮೇರೆಗೆ ಕಾಣಿಯೂರು ಗ್ರಾಮ ಪಂಚಾಯತ್ ಹಾಗೂ ಕಡಬ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಅಕ್ರಮ ಮದ್ಯ ಮಾರಾಟದ ಆರೋಪದಲ್ಲಿ ಅಂಗಡಿಗೆ ಈ ಹಿಂದೆಯೂ ಹಲವು ಬಾರಿ ದಾಳಿ ನಡೆದಿತ್ತೆನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News