ಹಾವು ಕಡಿತಕ್ಕೊಳಗಾದ ವ್ಯಕ್ತಿ ಮೃತ್ಯು
Update: 2016-07-20 23:43 IST
ಅಜೆಕಾರು, ಜು.20: ವಿಷದ ಹಾವು ಕಡಿತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಅಜೆಕಾರು ಕಿರಂಚಿಬೈಲುವಿನ ಗೋವರ್ಧನ ನಾಯ್ಕ(55) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಅಪರಾಹ್ನ ಮೃತಪಟ್ಟಿದ್ದಾರೆ.
ಇವರು ಜು.12ರಂದು ಸಂಜೆ ತೋಟದಿಂದ ಹುಲ್ಲು ಕೊಯ್ದು ಹಿಂದಿರುಗುತ್ತಿದ್ದ ವೇಳೆ ಕಾಲಿಗೆ ವಿಷದ ಹಾವೊಂದು ಕಚ್ಚಿತ್ತು. ಕೂಡಲೇ ಅವರನ್ನು ಕಾರ್ಕಳ ಆಸ್ಪತ್ರೆಗೆ ಕರೆದೊಯ್ದು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.