ಉಡುಪಿ: ಹರಿಕಥಾ ಸಪ್ತಾಹಕ್ಕೆ ಪೇಜಾವರ ಶ್ರೀ ಚಾಲನೆ
Update: 2016-07-20 23:55 IST
ಉಡುಪಿ, ಜು.20: ಪರ್ಯಾಯ ಪೇಜಾವರ ಮಠದ ಆಶ್ರಯದಲ್ಲಿ ಮಂಗಳೂರು ಕಲ್ಕೂರ ಪ್ರತಿಷ್ಠಾನ, ಹರಿಕಥಾ ಪರಿಷತ್ ಪ್ರಸ್ತುತ ಪಡಿಸುವ ಹರಿಕಥಾ ಸಪ್ತಾಹಕ್ಕೆ ಪರ್ಯಾಯ ಪೇಜಾವರ ಶ್ರೀವಿಶ್ವೇಶ ತೀರ್ಥ ಸ್ವಾಮೀಜಿ ಬುಧವಾರ ಸಂಜೆ ರಾಜಾಂಗಣದಲ್ಲಿ ಚಾಲನೆ ನೀಡಿದರು.
ಪೇಜಾವರ ಕಿರಿಯ ಯತಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು. ಹರಿಕಥಾ ಪರಿಷತ್ ಅಧ್ಯಕ್ಷ ಕೆ.ಮಹಾಬಲ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷ ಎಂ. ಎಲ್.ಸಾಮಗ, ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಉದ್ಯಮಿ ಪ್ರಸಾದ್‌ರಾಜ್ ಕಾಂಚನ್ ಮುಖ್ಯ ಅತಿಥಿಗಳಾಗಿದ್ದರು. ಕಲಾವಿದಜನಾರ್ದನ ಹಂದೆ, ಕಲಾ ಸಾರಥಿ ತೋನ್ಸೆ ಪುಷ್ಕಳ ಕುಮಾರ್ ಉಪಸ್ಥಿತರಿ ದ್ದರು.
ಪ್ರತಿಷ್ಠಾನದ ಪ್ರದೀಪ್ ಕುಮಾರ್ ಕಲ್ಕೂರ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ವಾಸುದೇವ ಭಟ್ ಕಾರ್ಯಕ್ರಮ ನಿರೂಪಿಸಿದರು.ಬಳಿಕ ವೈ.ಅನಂತ ಪದ್ಮನಾಭ ಭಟ್ ಕಾರ್ಕಳ ಇವರಿಂದ ‘ಪುರಂದರದಾಸರು’ ಹರಿಕಥೆ ಕಾರ್ಯಕ್ರಮ ಜರಗಿತು.