×
Ad

ಮೀಸಲು ಅರಣ್ಯದಿಂದ ಮರ ಸಾಗಾಟ: ಆರೋಪಿ ಸೆರೆ

Update: 2016-07-21 19:42 IST

ಮೂಡುಬಿದಿರೆ, ಜು.21: ಹೊಸಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೀಸಲು ಅರಣ್ಯದಿಂದ ಅಕ್ರಮವಾಗಿ ಮರವನ್ನು ಕಡಿದು ಸಾಗಿಸಲು ಯತ್ನಿಸುತ್ತಿದ್ದ ಆರೋಪಿಯನ್ನು ಮೂಡುಬಿದಿರೆ ಅರಣ್ಯಾಧಿಕಾರಿಗಳು ಬಂಧಿಸಿ ನ್ಯಾಯಾಲಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ಜೈಲು ಶಿಕ್ಷೆಯನ್ನು ವಿಧಿಸಿದ ಘಟನೆ ಬುಧವಾರ ಮೂಡುಬಿದಿರೆಯಲ್ಲಿ ನಡೆದಿದೆ.

ಹೊಸಬೆಟ್ಟು ಗ್ರಾ.ಪಂ.ನ ಬೊಗ್ರುಗುಡ್ಡೆಯ ನಿವಾಸಿ ಮೂಲತ: ಕಾರ್ಕಳ ತಾಲೂಕಿನ ಸತೀಶ್ ಹೆಗ್ಡೆ ಎಂಬಾತ ಹೊಸಬೆಟ್ಟು ಮೀಸಲು ಅರಣ್ಯದಿಂದ 1 ಲಕ್ಷ ರೂ. ವೌಲ್ಯದ ಹೆಬ್ಬಲಸು ಮರವನ್ನು ಅಕ್ರಮವಾಗಿ ಕಡಿದು ಸಾಗಿಸಲು ಯತ್ನಿಸುತ್ತಿದ್ದಾಗ ಖಚಿತ ಮಾಹಿತಿಯ ಮೇರೆಗೆ ಮೂಡುಬಿದಿರೆ ವಲಯ ಅರಣ್ಯಾಧಿಕಾರಿ ಜಿ.ಡಿ ದಿನೇಶ್ ಅವರ ನೇತೃತ್ವದಲ್ಲಿ ಉಪವಲಯಾರಣ್ಯಾಧಿಕಾರಿ ಪ್ರಕಾಶ್ ಶೆಟ್ಟಿ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ನಂತರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಆರೋಪಿಗೆ ಜೈಲು ಶಿಕ್ಷೆಯನ್ನು ವಿಧಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News