×
Ad

ಎಫ್.ಎಂ.ಖಾನ್ ನಿಧನ

Update: 2016-07-21 21:52 IST

ಮಡಿಕೇರಿ ಜು.21 : ರಾಜ್ಯಸಭೆೆಯ ಮಾಜಿ ಸದಸ್ಯ ಕೊಡಗಿನ ಎಫ್.ಎಂ. ಖಾನ್(85) ಅವರು ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.

ಮೃತರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ಜು.21 ರಂದು ನಿಧನರಾದರು. ಖಾನ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಅವರ ಸ್ವಗ್ರಾಮವಾದ ವೀರಾಜಪೇಟೆ ತಾಲೂಕಿನ ವಾಲ್ನೂರಿನಲ್ಲಿ ನಡೆಯಲಿದೆ.

ಖಾನ್ ಅವರ ನಿಧನಕ್ಕೆ ಜಿಲ್ಲಾ ಕಾಂಗ್ರೆಸ್ ತೀವ್ರ ಸಂತಾಪ ವ್ಯಕ್ತಪಡಿಸಿದೆ. 1980ರ ದಶಕದಲ್ಲಿ ಇಂದಿರಾ ಕಾಂಗ್ರೆಸ್ ಮೂಲಕ ರಾಜ್ಯ ಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಅಂದಿನ ಮುಖ್ಯಮಂತ್ರಿ ಆರ್. ಗುಂಡೂರಾವ್ ಹಾಗೂ ಎಫ್.ಎಂ.ಖಾನ್ ಅವರು ಸಹೋದರರಂತೆ ರಾಜ್ಯದಲ್ಲಿ ಕಾರ್ಯ ನಿರ್ವಹಿಸಿದ್ದರು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಟಿ.ಪಿ.ರಮೇಶ್ ನೆನಪಿಸಿಕೊಂಡಿದ್ದಾರೆ. ಇಂದಿರಾ ಕಾಂಗ್ರೆಸ್‌ನಲ್ಲೇ ಗುರುತಿಸಿಕೊಂಡಿದ್ದ ಎಫ್.ಎಂ.ಖಾನ್ ಅವರು ರೈತ ಸಂಘವನ್ನು ಕೂಡ ಕಟ್ಟಿದ್ದರು.

ಅಗಲಿದ ಹಿರಿಯ ನಾಯಕನಿಗೆ ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ.ಕೆ.ಮಂಜುನಾಥ್ ಕುಮಾರ್, ಜಿಪಂ ಸದಸ್ಯರಾದ ಕೆ.ಪಿ.ಚಂದ್ರಕಲಾ, ಮಹಿಳಾ ಘಟಕದ ಅಧ್ಯಕ್ಷರಾದ ಕುಮುದಾ ಧರ್ಮಪ್ಪ, ವಿಧಾನ ಪರಿಷತ್‌ನ ಮಾಜಿ ಸದಸ್ಯರಾದ ಸಿ.ಎಸ್.ಅರುಣ್ ಮಾಚಯ್ಯ, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್ ಮತ್ತಿತ್ತರ ಪ್ರಮುಖರು ಸಂತಾಪ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News