×
Ad

ನಿರೀಕ್ಷಿತ ಫಲಿತಾಂಶ ಬರದಿದ್ದರೆ ಶಿಕ್ಷಕರ ವಿರುದ್ಧ ಶಿಸ್ತುಕ್ರಮ: ಡಿಸಿ ಡಾ.ರಿಚರ್ಡ್

Update: 2016-07-21 22:10 IST

ಮಡಿಕೇರಿ, ಜು. 21: ಶಿಕ್ಷಕರು ತಾವು ಉಪನ್ಯಾಸ ನೀಡುವ ವಿಷಯದಲ್ಲಿ ನಿರೀಕ್ಷಿತ ಫಲಿತಾಂಶ ಬರದಿದ್ದಲ್ಲಿ ಶಿಕ್ಷಕರ ವಿರುದ್ಧವೇ ಶಿಸ್ತುಕ್ರಮ ಕೈಗೊಳ್ಳಬೇಕು. ಆ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಸೂಚನೆ ನೀಡಿದ್ದಾರೆ.

ನಗರದ ಸಂತ ಮೈಕಲರ ಶಾಲೆಯಲ್ಲಿ ಜಿಲ್ಲೆಯ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರ ಉಪಸ್ಥಿತಿಯಲ್ಲಿ ಎಸೆಸೆಲ್ಸಿ ಫಲಿತಾಂಶ ಉತ್ತಮ ಪಡಿಸುವುದು ಮತ್ತು ಶೈಕ್ಷಣಿಕ ಚಟುವಟಿಕೆ ಸುಧಾರಣೆ ಕುರಿತು ನಡೆದ ಮುಖ್ಯೋಪಾಧ್ಯಾಯರ ಸಮಾಲೋಚನಾ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.

  ಎಸೆಸೆಲ್ಸಿ ಫಲಿತಾಂಶ ಜಿಲ್ಲೆಯ ಶೈಕ್ಷಣಿಕ ಕ್ಷೇತ್ರದ ಕೈಗನ್ನಡಿಯಾಗಿದ್ದು, ಶಿಕ್ಷಕರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಫಲಿತಾಂಶ ಹೆಚ್ಚಳಕ್ಕೆ ಇನ್ನಷ್ಟು ಪ್ರಯತ್ನ ಮಾಡಬೇಕು. ಶಿಕ್ಷಕರು ಮಾನವ ಸಂಪನ್ಮೂಲದ ಶಿಲ್ಪಿಗಳು. ಬರೀ ಹೊಟ್ಟೆ ಪಾಡಿಗಾಗಿ ಕೆಲಸ ಮಾಡುವವರಲ್ಲ. ಸಮಾಜ ರೂಪಿಸುವ ಕೆಲಸ ಮಾಡುವವರು ಎಂಬುವುದನ್ನು ಮರೆಯಬಾರದು ಎಂದು ಜಿಲ್ಲಾಧಿಕಾರಿ ಅವರು ಕಿವಿಮಾತು ಹೇಳಿದರು. ಎಸೆಸೆಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಸರಿಯಾದ ಮಾರ್ಗದರ್ಶನ, ಸಲಹೆ ನೀಡಿ ಫಲಿತಾಂಶ ಸುಧಾರಣೆಯತ್ತ ಹೆಚ್ಚಿನ ಗಮನಹರಿಸಬೇಕಿದೆ ಎಂದು ಡಾ.ರಿಚರ್ಡ್ ವಿನ್ಸೆಂಟ್ ಡಿಸೋ

ಜ ಅವರು ಹೇಳಿದರು. ಸಮಾಜದಲ್ಲಿ ಬಡತನ, ಅನಕ್ಷರತೆ, ಅಸಮಾನತೆ, ಮೂಢನಂಬಿಕೆ, ಆರೋಗ್ಯ ಮತ್ತಿತರ ಸಮಸ್ಯೆಗಳು ಇರಬಹುದು. ಆದರೆ ಸರಕಾರ ಮಧ್ಯಾಹ್ನದ ಬಿಸಿಯೂಟ, ಬೈಸಿಕಲ್, ಸಮವಸ್ತ್ರ, ಪಠ್ಯಪುಸ್ತಕ, ವಿದ್ಯಾರ್ಥಿ ನಿಲಯ ಹೀಗೆ ಹಲವು ಕಾರ್ಯಕ್ರಮಗಳನ್ನು ಒದಗಿಸುತ್ತಿದೆ. ಆದರೂ ಫಲಿತಾಂಶ ಕುಸಿತದ ಕಾರಣವನ್ನು ಅವಲೋಕನ ಮಾಡಬೇಕಿದೆ ಎಂದು ಅವರು ಹೇಳಿದರು. ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಬ್ಬರೂ ಸ್ಪರ್ಧೆಯನ್ನು ಎದುರಿಸುವುದು ಅನಿವಾರ್ಯ.ಸಮಾಜದಲ್ಲಿ ಯಶಸ್ವಿ ಪ್ರಜೆಯಾಗಿ ರೂಪಿಸಲು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಬೇಕಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಿ.ಆರ್. ಬಸ    

ರಾಜು ಮಾತನಾಡಿ, ಕೊಡಗು ಜಿಲ್ಲೆ ಎಸೆಸೆಲ್ಸಿ ಫಲಿತಾಂಶದಲ್ಲಿ 18ನೆ ಸ್ಥಾನದಲ್ಲಿದೆ. ಕಳೆದ ಬಾರಿಯೂ 18ನೆ ಸ್ಥಾನದಲ್ಲಿತ್ತು. ಫಲಿತಾಂಶ ಉತ್ತಮ ಪಡಿಸಲು ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು ಪ್ರಯತ್ನಿಸಬೇಕಾಗಿರುವುದು ಜಿಲ್ಲೆಯ ಅನಿವಾರ್ಯ ಎಂದು ವಿವರಿಸಿದರು. ಶಿಕ್ಷಕರು ಪಾಠ ಮಾಡುವುದರ ಜೊತೆಗೆ ವಿದ್ಯಾರ್ಥಿಗಳ ಬರವಣಿಗೆಯನ್ನು ಸಹ ಗಮನಿಸಬೇಕು. ಜೊತೆಗೆ ಸಂವಾದ ಚರ್ಚೆಗಳನ್ನು ನಡೆಸಬೇಕು. ಮಕ್ಕಳ ಕಲಿಕೆಯ ಖಾತರಿಪಡಿಸಿಕೊಳ್ಳುವತ್ತ ನಿಗಾವಹಿಸಬೇಕು. ಮಕ್ಕಳಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡಬೇಕು ಎಂದರು. ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಶೇ. 83ರಷ್ಟು ಫಲಿತಾಂಶ ಬಂದಿದ್ದರೆ, ಇಂಗ್ಲಿಷ್ ಭಾಷೆಯಲ್ಲಿ ಶೇ. 91 ರಷ್ಟು ಫಲಿತಾಂಶ ಬಂದಿದೆ. ಗಣಿತ ಮತ್ತು ವಿಜ್ಞಾನ ವಿಷಯಗಳ ಬಗ್ಗೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದು ಅವರು ಹೇಳಿದರು. ಡಯಟ್ ಪ್ರಾಂಶುಪಾಲ ದೊಡ್ಡಮಲ್ಲಪ್ಪ, ಉಪ ಯೋಜನಾ ಸಮನ್ವಯಾಧಿಕಾರಿ ಭಾಗ್ಯಲಕ್ಷ್ಮೀ, ವಿಷಯ ಪರಿವೀಕ್ಷಕರಾದ ದೇವನಾಯಕ್, ಮಹದೇವು ಸೇರಿದಂತೆ ಜಿಲ್ಲೆಯ ಸರಕಾರಿ, ಅನುದಾನಿತ, ಅನುದಾನ ರಹಿತ ಪ್ರೌಢ ಶಾಲೆಗಳ ಮುಖ್ಯೋಪಾಧ್ಯಾಯರು ಸಭೆಯಲ್ಲಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News