×
Ad

ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Update: 2016-07-21 23:59 IST

ಮಂಗಳೂರು, ಜು.21: ಪ್ರಸಕ್ತ ಸಾಲಿಗೆ ಮೆಟ್ರಿಕ್‌ಪೂರ್ವ ವಿದ್ಯಾರ್ಥಿವೇತನ ಮಂಜೂರಾತಿಗಾಗಿ ಪ.ಜಾತಿ/ಪ.ವರ್ಗದ 1ನೆ ತರಗತಿಗೆ ಪ್ರವೇಶ ಪಡೆದ ಹಾಗೂ ಹಿಂದಿನ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿವೇತನಕ್ಕೆ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ನೋಂದಣಿ ಮಾಡದಿರುವ ವಿದ್ಯಾರ್ಥಿಗಳು ಈ ವರ್ಷ ಇಲಾಖಾ ವೆಬ್‌ಸೈಟ್ www.sw.kar.nic.inನಲ್ಲಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು. ಬೇರೆ ಶಾಲೆಯಿಂದ ವರ್ಗಾವಣೆಗೊಂಡು ದಾಖಲಾಗಿ ರುವ ವಿದ್ಯಾರ್ಥಿಗಳ ವಿವರವನ್ನು ಮುಖ್ಯೋಪಾಧ್ಯಾಯರು ಸಮಾಜ ಕಲ್ಯಾಣ ಇಲಾಖೆ, ಅಂಬೇಡ್ಕರ್ ಭವನ, ಕೊಡಿಯಾಲ್‌ಬೈಲ್, ಮಂಗಳೂರು ಈ ಕಚೇರಿಯಿಂದ ಪಡೆದು ಇಲ್ಲಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವವರು ಪ.ಜಾತಿ/ಪ.ವರ್ಗಕ್ಕೆ ಸೇರಿದವರಾಗಿರಬೇಕು, ಪೋಷಕರ ವಾರ್ಷಿಕ ಆದಾಯ ಮಿತಿ 2 ಲಕ್ಷ ರೂ. ಒಳಗಿರಬೇಕು, (ಸರಕಾರಿ/ಖಾಸಗಿ ನೌಕರರಾಗಿದ್ದಲ್ಲಿ ಇತ್ತೀಚಿನ ವೇತನ ದೃಢಪತ್ರ ನೀಡಬೇಕಾಗಿರುತ್ತದೆ), ಕರ್ನಾಟಕ ರಾಜ್ಯದವರಾಗಿರಬೇಕು, ಕಡ್ಡಾಯವಾಗಿ ವಿದ್ಯಾರ್ಥಿಗಳು ಅವರ ಹೆಸರಿನಲ್ಲೇ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾತೆ ಹೊಂದಿರಬೇಕು ಮತ್ತು ಬ್ಯಾಂಕ್ ಅಕೌಂಟ್ ಚಾಲ್ತಿಯಲ್ಲಿರಬೇಕು. ವಿದ್ಯಾರ್ಥಿಯು ಯಾವುದೇ ವಿದ್ಯಾರ್ಥಿನಿಲಯದಲ್ಲಿ ವಾಸ್ತವ್ಯವಿರಬಾರದು ಹಾಗೂ ಆಧಾರ್ ಕಾರ್ಡ್ ಹೊಂದಿರಬೇಕು, ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿ/ಪೋಷಕರಿಗೆ ಹಾಗೂ ಮುಖ್ಯೋಪಾಧ್ಯಾಯರಿಗೆ ಸೂಚನೆಗಳಿದ್ದು, ಇದನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಬೇಕು.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಸ್ಟ್ 15. ಅರ್ಜಿ ಸಲ್ಲಿಸುವಾಗ ತೊಂದರೆಯಾದಲ್ಲಿ ಇಲಾಖೆಯ ಟೋಲ್‌ಫ್ರೀ ದೂ.ಸಂ.: 180042521111ಗೆ ಕರೆಮಾಡಿ ಅಥವಾ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಅಂಬೇಡ್ಕರ್ ಭವನ, ಕೊಡಿಯಾಲ್‌ಬೈಲ್(ದೂ.ಸಂ.:2441269/2423619) ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News