ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
Update: 2016-07-22 09:45 IST
ಮಂಗಳೂರು, ಜು.22: ನಗರದ ಕಂಕನಾಡಿ ಬಳಿಯ ಜೆಪ್ಪು ಸೈಂಟ್ ಜೆರೋಸಾ ಶಾಲೆ ಬಳಿಯ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ.
ಮೃತಪಟ್ಟವರನ್ನು ನಗರದ ಮಜಿಲ ನಿವಾಸಿ ಗೋಪಾಲಕೃಷ್ಣ ಎಂದು ಗುರುತಿಸಲಾಗಿದೆ.
ಮೃತ ಗೋಪಾಲಕೃಷ್ಣ ತೀವ್ರ ಕುಡಿತದ ಚಟವನ್ನು ಹೊಂದಿದ್ದು, 2 ದಿನಗಳ ಹಿಂದೆ ಮನೆಯಿಂದ ತೆರಳಿದ್ದವರು ಮನೆಗೆ ವಾಪಸ್ಸಾಗಿರಲಿಲ್ಲ ಎಂದು ತಿಳಿದುಬಂದಿದೆ. ಇಂದು ಬಸ್‌ನಿಲ್ದಾಣದಲ್ಲಿ ಮೃತದೇಹವನ್ನು ಕಂಡ ಸಾರ್ವಜನಿಕರು ಅವರ ಮನೆಯವರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಪಾಂಡೇಶ್ವರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.