ಕಾಸರಗೋಡು: ಕೆಎಸ್ಸಾರ್ಟಿಸಿ ಬಸ್‌ಗಳ ಮಧ್ಯೆ ಢಿಕ್ಕಿ; ಮೂವರಿಗೆ ಗಾಯ
Update: 2016-07-22 15:23 IST
ಕಾಸರಗೋಡು, ಜು.22: ಕೇರಳ ಮತ್ತು ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸುಗಳೆರಡು ಢಿಕ್ಕಿಯಾದ ಘಟನೆ ಕಾಸರಗೋಡು ಹೊಸಬಸ್ ನಿಲ್ದಾಣದ ಬಳಿ ಸಂಭವಿಸಿದೆ.
ಢಿಕ್ಕಿಯ ಪರಿಣಾಮ ಬಸ್ಸಿನಲ್ಲಿದ್ದ ಮಗು ಸೇರಿದಂತೆ ಮೂವರು ಗಾಯಗೊಂಡಿದ್ದಾರೆ.
ಮಂಗಳೂರಿಂದ ಕಾಸರಗೋಡಿಗೆ ಆಗಮಿಸುತ್ತಿದ್ದ ಕೇರಳ ಕೆಎಸ್ಸಾರ್ಟಿಸಿ ಬಸ್ಸಿನ ಹಿಂಭಾಗಕ್ಕೆ ಕರ್ನಾಟಕ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದಿದೆ. ಬಸ್ ನಿಲ್ದಾಣ ಪ್ರವೇಶ ದ್ವಾರದ ಬಳಿ ಕೇರಳ ಸಾರಿಗೆ ಬಸ್ಸು ಚಾಲಕ ಏಕಾಏಕಿ ಬ್ರೇಕ್ ಹಾಕಿದಾಗ ಮತ್ತೊಂದು ಬಸ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಘಟನೆಯಿಂದಾಗಿ ಎರಡೂ ಬಸ್‌ಗಳು ಹಾನಿಗೊಂಡಿವೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.