×
Ad

ರಾಜ್ಯ ಸರಕಾರ ಜನರ ವಿಶ್ವಾಸ ಕಳೆದುಕೊಂಡಿದೆ: ಅರವಿಂದ ಲಿಂಬಾವಳಿ

Update: 2016-07-22 18:54 IST

ಮಂಗಳೂರು, ಜು.22; ಪ್ರಸಕ್ತ ಕಾಂಗ್ರೆಸ್ ಸರಕಾರದ ಬಗ್ಗೆ ಜನರ ಆಕ್ರೋಶವಿದ್ದು, ಹಿಂದಿನ ಬಿಜೆಪಿ ಸರಕಾರದ ಬಗ್ಗೆ ಜನರಲ್ಲಿ ಉತ್ತಮ ಅಭಿಪ್ರಾಯವಿದೆ. ಇದನ್ನು ಮತವಾಗಿ ಪರಿವರ್ತಿಸಿ ಮುಂದಿನ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರಬೇಕು ಎಂದು ರಾಜ್ಯದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಹೇಳಿದರು.

ಅವರು ಕೊಡಿಯಾಲ್‌ಬೈಲಿನಲ್ಲಿರುವ ಪಕ್ಷದ ಕಚೇರಿಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿಯ ಪ್ರಥಮ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯದಲ್ಲಿರುವುದು ಭಂಡ ಸರಕಾರ. ಕೇವಲ ಮೂರೇ ವರ್ಷಗಳಲ್ಲಿ ರಾಜ್ಯದ ಜನತೆಯ ವಿಶ್ವಾಸವನ್ನು ಕಳೆದುಕೊಂಡಿದೆ. ಸರಕಾರ ಸರಿ ಇಲ್ಲ, ನಾಯಕತ್ವವೂ ಸರಿ ಇಲ್ಲ ಎಂದು ಜನತೆ ಅಭಿಪ್ರಾಯ ವ್ಯಕ್ತ ಪಡಿಸುತ್ತಿದ್ದಾರೆ. ಇದಕ್ಕಿಂತ ಬಿಜೆಪಿ ಸರಕಾರ ಚೆನ್ನಾಗಿತ್ತು. ಅವರು ಅಭಿವೃದ್ಧಿಗೆ ಒತ್ತು ಕೊಡುತ್ತಿದ್ದರು ಎಂದು ಹೇಳುತ್ತಿದ್ದಾರೆ. ಇದನ್ನು ಇಟ್ಟುಕೊಂಡು ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ 8 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಆಯ್ಕೆಯಾಗಲು ಜಿಲ್ಲಾ ಕಾರ್ಯಕಾರಿಣಿಯ ಜವಾಬ್ದಾರಿ ಹೊತ್ತಿರುವವರು ಕಾರ್ಯಪ್ರವೃತ್ತರಾಗಬೇಕು ಎಂದು ಹೇಳಿದರು.

ಇತ್ತೀಚೆಗೆ ನಿಧನರಾದ ಕಸ್ತೂರಿ ವರದರಾಯ ಪೈ ಮತ್ತು ಎಂ.ಕೆ.ಗಣಪತಿ ಅವರಿಗೆ ಸಂತಾಪ ವ್ಯಕ್ತ ಪಡಿಸಲಾಯಿತು

ಸಭೆಯಲ್ಲಿ ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜೀವ ಮಠಂದೂರು, ಪ್ರತಿಪಕ್ಷದ ಮುಖ್ಯ ಸಚೇತಕ ಕ್ಯಾ.ಗಣೇಶ ಕಾರ್ಣಿಕ್, ವಿಧಾನ ಪರಿಷತ್ತು ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮತ್ತು ವಿಧಾನ ಸಭಾ ಸದಸ್ಯ ಎಸ್.ಅಂಗಾರ ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಶಾರದಾ ರೈ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ಪಿಜಿಎನ್ ಪ್ರಸಾದ್ ವಂದಿಸಿದರು. ಪ್ರಧಾನ ಕಾರ್ಯದರ್ಶಿ ಎಂ.ಸುದರ್ಶನ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News