ನೆಟ್ಟಣಿಗೆ ಮುಡ್ನೂರಿನಲ್ಲಿ ಗದ್ದೆಗಿಳಿದ ವಿದ್ಯಾರ್ಥಿಗಳು
Update: 2016-07-22 20:45 IST
ಪುತ್ತೂರು, ಜು.22: ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರಿನ ವಿದ್ಯಾರ್ಥಿಗಳಿಗೆ ಕೃಷಿ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಶಾಲೆಯ ವಿದ್ಯಾರ್ಥಿಗಳು ಶಾಲಾ ಸಮೀಪದ ಗದ್ದೆಗಿಳಿದು ನಾಟಿ ಕಾರ್ಯದಲ್ಲಿ ತೊಡಗಿಸಿಕೊಂಡರು.
ಸ್ಥಳೀಯರಾದ ಸತೀಶ್ ರೈ ಅವರ ಗದ್ದೆಗೆ ಭೇಟಿ ನೀಡಿದ ವಿದ್ಯಾರ್ಥಿಗಳು, ಹಾಗೂ ಅಧ್ಯಾಪಕ ವೃಂದ ಗದ್ದೆಗಿಳಿದು ಭತ್ತದ ಸಸಿಯನ್ನು ನಾಟಿ ಮಾಡಿದರು. ಈ ಸಂದರ್ಭದಲ್ಲಿ ಮಕ್ಕಳಿಗೆ ಭತ್ತವನ್ನು ನಾಟಿ ಮಾಡುವ ಕುರಿತು ತಿಳುವಳಿಕೆಯನ್ನು ನೀಡಲಾಯಿತು. ಬಳಿಕ ವಿದ್ಯಾರ್ಥಿಗಳು ಅಡಿಕೆ ಹಾಗೂ ಬಾಳೆ ತೋಟಗಳಿಗೆ ಭೇಟಿ ನೀಡಿ ಕೃಷಿ ಮಾಡುವ ವಿಧಾನಗಳ ಕುರಿತು ಮಾಹಿತಿ ಪಡೆದುಕೊಂಡರು.
ಪ್ರಗತಿಪರ ಕೃಷಿಕ ಕುಮಾರ್ ಪೆರ್ನಾಜೆ, ಸತೀಶ್ ರೈ, ನೆಟ್ಟಣಿಗೆ ಮುಡ್ನೂರು ಗ್ರಾಪಂ ಉಪಾಧ್ಯಕ್ಷ ಶ್ರೀರಾಂ ಪಕ್ಕಳ ಸದಸ್ಯರಾದ ಇಬ್ರಾಹೀಂ, ಲೀಲಾವತಿ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.