×
Ad

ಡಾರ್ಜಿಲಿಂಗ್‌ :ಮೂರು ಅಂತಸ್ತಿನ ಕಟ್ಟಡ ಕುಸಿತ ; ನಾಲ್ವರು ಬಲಿ, ಹಲವರಿಗೆ ಗಾಯ

Update: 2016-07-23 12:18 IST

ಡಾರ್ಜಿಲಿಂಗ್, ಜು.23: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ ನಗರದಲ್ಲಿ ಶುಕ್ರವಾರ ತಡರಾತ್ರಿ ಮೂರು ಅಂತಸ್ತಿನ ಕಟ್ಟಡವೊಂದು ಡಿಢೀರನೆ ಕುಸಿದು ಬಿದ್ದ ಪರಿಣಾಮವಾಗಿ ನಾಲ್ವರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ.
ಡಾ.ಝಾಕೀರ‍್ ಹುಸೈನ್‌ ಪ್ರದೇಶದಲ್ಲಿರುವ ಕಟ್ಟಡ ಕುಸಿದು ಬಿದ್ದ ಪರಿಣಾಮವಾಗಿ ಹಲವು ಮಂದಿ ಕಟ್ಟಡದ ಅವಶೇಷದಡಿ ಸಿಲುಕಿಕೊಂಡಿದ್ದರು. ಈ ಪೈಕಿ ಹತ್ತು ಮಂದಿಯನ್ನು ಹೊರಕ್ಕೆ ತೆಗೆಯಲಾಗಿದೆ. ಪ್ರಕರಣದಲ್ಲಿ  ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಆರು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News