×
Ad

ಎಸ್ಸೆಸ್ಸೆಫ್ ತೊಕ್ಕೊಟ್ಟು ಸೆಕ್ಟರ್ ರಿಲೀಫ್ ಸರ್ವಿಸ್ ವತಿಯಿಂದ ವಿಧವಾ ವೇತನ ವಿತರಣೆ

Update: 2016-07-23 20:44 IST

ಕೊಣಾಜೆ, ಜು.23: ಎಸ್ಸೆಸ್ಸೆಫ್ ತೊಕ್ಕೊಟ್ಟು ಸೆಕ್ಟರ್ ರಿಲೀಫ್ ಸರ್ವಿಸ್ ವತಿಯಿಂದ ಬಡ ಕುಟುಂಬದ ವಿಧವೆಯರಿಗೆ ವಿಧವಾ ವೇತನ ವಿತರಿಸಲಾಯಿತು.

ಕುಂಪಲದ ಗ್ರೀನ್ ಮಹಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂರಾನಿ ಯತೀಂ ಖಾನ ಮತ್ತು ದಾರುಲ್ ಮಸಾಕೀನ್‌ನ ಪ್ರಧಾನ ಕಾರ್ಯದರ್ಶಿ ಹಾಜಿ ಇಕ್ಬಾಲ್ ವಿಧವಾವೇತನದ ಚೆಕ್ ವಿತರಿಸಿದರು.

ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಉಪಾದ್ಯಕ್ಷ ಮುನೀರ್ ಅಹ್ಮದ್ ಖಾಮಿಲ್ ಸಖಾಫಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸಂಸ್ಥೆಯ ಕಾರ್ಯವನ್ನು ಶ್ಲಾಘಿಸಿದರು.

ಎಸ್ಸೆಸ್ಸೆಫ್ ತೊಕ್ಕೊಟ್ಟು ಸೆಕ್ಟರ್ ಅಧ್ಯಕ್ಷ ಇಲ್ಯಾಸ್ ಸಖಾಫಿ ಅಧ್ಯಕ್ಷತೆ ವಹಿಸಿದ್ದರು. ಎಸ್ಸೆಸ್ಸೆಫ್ ತೊಕ್ಕೊಟ್ಟು ಸೆಕ್ಟರ್ ರಿಲೀಫ್ ಸರ್ವಿಸ್ ಪ್ರಚಾರ ಸಮಿತಿಯ ಕನ್ವೀನರ್ ಉಮರಬ್ಬ ಕೈರಂಗಳ, ಕಾರ್ಯದರ್ಶಿ ಬಾತಿಶ್ ಮಂಚಿಲ ಉಪಸ್ಥಿತರಿದ್ದರು.

ಎಸ್ಸೆಸ್ಸೆಫ್ ಜಿಲ್ಲಾ ಕೋಶಾಧಿಕಾರಿ ಹಾಗೂ ಎಸ್ಸೆಸ್ಸೆಫ್ ತೊಕ್ಕೊಟ್ಟು ಸೆಕ್ಟರ್ ರಿಲೀಫ್ ಸರ್ವಿಸ್‌ನ ಅಧ್ಯಕ್ಷ ಅಲ್ತಾಫ್ ಕುಂಪಲ ಸ್ವಾಗತಿಸಿದರು. ಕೋಶಾಧಿಕಾರಿ ಶಮೀರ್ ಸೇವಂತಿ ಗುಡ್ಡೆ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News