ಶಂಕಿತ ಡೆಂಗ್‌ಗೆ ಯುವಕ ಬಲಿ

Update: 2016-07-23 15:37 GMT

ಮಂಗಳೂರು, ಜು.23: ಸುಮಾರು 15 ದಿನಗಳ ಕಾಲ ತೀವ್ರ ಕಾಡಿದ ಜ್ವರದಿಂದ ಚಿಕಿತ್ಸೆ ಫಲಕಾರಿಯಾಗದೆ ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಸುಳ್ಯಪದವು ನಿವಾಸಿ ಯೂಸುಫ್ (34) ಎಂಬವರು ಮೃತಪಟ್ಟಿರುವ ಘಟನೆ ಇಂದು ನಡೆದಿದೆ. ಇವರು ಡೆಂಗ್‌ಗೆ ಬಲಿಯಾಗಿದ್ದಾರೆ ಎಂದು ಶಂಕಿಸಲಾಗಿದೆ.

ಕಳೆದ ಕೆಲವು ಸಮಯದಿಂದ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ 15 ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ಜ್ವರಕ್ಕಾಗಿ ಸ್ಥಳೀಯ ವೈದ್ಯರಿಂದ ಚಿಕಿತ್ಸೆ ಪಡೆದಿದ್ದರು. ಆದರೂ ಜ್ವರ ಉಲ್ಬಣಗೊಂಡಿದ್ದರಿಂದ ಮೂರು ದಿನಗಳ ಹಿಂದೆ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅವರು ಡೆಂಗ್ ಜ್ವರಕ್ಕೆ ಬಲಿಯಾಗಿದ್ದಾರೆ ಎಂದು ಅವರ ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News