ತೆರಿಗೆ ವಂಚಿಸಿ ಅಡಿಕೆ ಸಾಗಾಟ ಪತ್ತೆ
Update: 2016-07-23 23:55 IST
ಕಾಸರಗೋಡು, ಜು.23: ತೆರಿಗೆ ವಂಚಿಸಿ ಕರ್ನಾಟಕಕ್ಕೆ ಸಾಗಾಟ ಮಾಡಲಾಗುತ್ತಿದ್ದ 33 ಕ್ವಿಂಟಾಲ್ ಅಡಿಕೆಯನ್ನು ಮಾರಾಟ ತೆರಿಗೆ ಜಾಗೃತ ದಳದ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಲಾರಿಯೊಂದನ್ನು ತಪಾಸಣೆ ಮಾಡುತ್ತಿದ್ದಾಗ ತೆರಿಗೆ ವಂಚಿಸಿ ಅಡಿಕೆಯನ್ನು ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಸುಮಾರು 8 ಲಕ್ಷ ರೂ. ಮೌಲ್ಯದ ಅಡಿಕೆ ಲಾರಿಯಲ್ಲಿತ್ತು ಎಂದು ಅಂದಾಜಿಸಲಾಗಿದೆ.
ತಪಾಸಣೆ ನಡೆಸಿದಾಗ ಯಾವುದೇ ದಾಖಲೆಗಳಿರಲಿಲ್ಲ. 1.9 ಲಕ್ಷ ರೂ. ದಂಡ ವಿಧಿಸಿ ಬಿಟ್ಟುಕೊಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಡಿ ಪ್ರದೇಶದ ಮೂಲಕ ಕೇರಳದಿಂದ ಕರ್ನಾಟಕಕ್ಕೆ ತೆರಿಗೆ ವಂಚಿಸಿ ಭಾರೀ ಪ್ರಮಾಣದಲ್ಲಿ ಅಕ್ರಮ ಸಾಗಾಟ ನಡೆಯುತ್ತಿದೆ ಎನ್ನಲಾಗಿದ್ದು, ಮುಂದಿನ ದಿನಗಳಲ್ಲೂ ತೀವ್ರ ತಪಾಸಣೆಗೆ ತೀರ್ಮಾನಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.