ಜು.25, 26ರಂದು ರಾಜ್ಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
Update: 2016-07-24 14:56 IST
ಬೆಂಗಳೂರು, ಜು.24: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಜು.25 ಮತ್ತು 26ರಂದು ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ವೇತನ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ರಜೆ ಘೋಷಣೆ ಮಾಡಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಸಾರಿಗೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿಗಳು ರಜೆ ಘೋಷಣೆ ಸಹಿತ ಈ ಸಂದರ್ಭ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.