ದ.ಕ., ಉಡುಪಿ ಜಿಲ್ಲೆಗಳಲ್ಲಿ ರಜೆ ಇಲ್ಲ
ಮಂಗಳೂರು, ಜು.24; ದ.ಕ. ಜಿಲ್ಲೆಯಲ್ಲಿ ಸೋಮವಾರ ಶಾಲಾ ಕಾಲೇಜುಗಳು ಎಂದಿನಂತೆ ಇರಲಿದ್ದು, ಯಾವುದೇ ರಜೆ ಇರುವುದಿಲ್ಲ. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲೆಗೆ ಖಾಸಗಿ ಬಸ್ಸು, ವಾಹನಗಳಲ್ಲಿ ಆಗಮಿಸಬೇಕು ಎಂದು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹೀಂ ತಿಳಿಸಿದ್ದಾರೆ.
ನಾಳೆಯಿಂದ ಕೆಎಸ್ಸಾರ್ಟಿಸಿ ನೌಕರರ ಮುಷ್ಕರ ಇದ್ದರೂ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ಸುಗಳು ಮತ್ತು ವಾಹನಗಳೇ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಾಚರಿಸುತ್ತಿದ್ದು, ಕೆಎಸ್ಸಾರ್ಟಿಸಿ ಮುಷ್ಕರ ಜಿಲ್ಲೆಯ ಜನಜೀವನದ ಮೇಲೆ ಅಷ್ಟೇನು ಪರಿಣಾಮ ಬೀರುವುದಿಲ್ಲ. ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಖಾಸಗಿ ಬಸ್ಸು ವಾಹನಗಳನ್ನೇ ಹೆಚ್ಚಾಗಿ ಅವಲಂಬಿಸಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಕೆಎಸ್‌ಆರ್‌ಟಿಸಿ ಬಸ್ ಮುಷ್ಕರದಿಂದ ಉಡುಪಿ ಜಿಲ್ಲೆಯ ಶಾಲಾ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಸೋಮವಾರ ಮತ್ತು ಮಂಗಳವಾರ ರಜೆ ನೀಡಿಲ್ಲ ಎಂದು ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ದಿವಾಕರ ಶೆಟ್ಟಿ ಪತ್ರಿಕೆಗೆ ತಿಳಿಸಿದ್ದಾರೆ.