×
Ad

ಮೂಡುಬಿದಿರೆ: ಕಳ್ಳತನಕ್ಕೆ ಯತ್ನಿಸಿದ ಇಬ್ಬರ ಬಂಧನ

Update: 2016-07-24 19:23 IST

ಮೂಡುಬಿದಿರೆ, ಜು.24: ಇಲ್ಲಿಗೆ ಸಮೀಪದ ದರೆಗುಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಪೇಟೆಯ ಬಳಿ ಶನಿವಾರ ರಾತ್ರಿ ಕಳ್ಳತನಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.

ಹೆಜಮಾಡಿಯ ಸುಲೈಮಾನ್ ಫೈಝಲ್ ಮತ್ತು ಮುಹಮ್ಮದ್ ಶಫೀಕ್ ಬಂಧಿತ ಆರೋಪಿಗಳಾಗಿದ್ದಾರೆ.

ಶನಿವಾರ ರಾತ್ರಿ ಸುಮಾರು 11 ಗಂಟೆಯ ವೇಳೆಗೆ ಬೈಕ್‌ನಲ್ಲಿ ಬಂದ ಇವರಿಬ್ಬರು ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದಾಗ ಸ್ಥಳೀಯರು ವಿಚಾರಣೆ ನಡೆಸಿದ್ದು ಆಗ ಸ್ಪಷ್ಟ ಮಾಹಿತಿಯನ್ನು ನೀಡಿರಲಿಲ್ಲ. ಈ ಬಗ್ಗೆ ಸಂಶಯಗೊಂಡ ಸ್ಥಳೀಯರು ಮೂಡುಬಿದಿರೆ ಪೊಲೀಸರಿಗೆ ಮಾಹಿತಿ ನೀಡಿದ್ದರು.
 ಪೊಲೀಸರು ಸ್ಥಳಕ್ಕಾಗಮಿಸಿ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದಾಗ ಕಳ್ಳತನ ನಡೆಸಲು ಬಂದಿರುವುದಾಗಿ ಬಾಯ್ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಆರೋಪಿಗಳ ವಿರುದ್ಧ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News