ಉಳ್ಳಾಲ: ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರಿಗೆ ಗಾಯ
ಉಳ್ಳಾಲ, ಜು. 24: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಅಪರಾಹ್ನ ನಡೆದ ಪ್ರತ್ಯೇಕ ಎರಡು ಅಪಘಾತಗಳಲ್ಲಿ ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಇಂದು ನಡೆದಿದೆ.
ಕುಂಪಲ ಬೈಪಾಸ್ ಜಂಕ್ಷನ್‌ನಲ್ಲಿ ನಡೆದ ಸರಣಿ ಅಪಘಾತದಲ್ಲಿ ಸ್ಥಳೀಯ ಬೈಪಾಸ್ ನಿವಾಸಿ ಆರಿಫ್ (20) ತಲೆಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಂಗಳೂರಿನಿಂದ ತಲಪಾಡಿ ಕಡೆಗೆ ತೆರಳುತ್ತಿದ್ದ ಓಮ್ನಿ ಕಾರಿಗೆ ಹಿಂದಿನಿಂದ ಸ್ವಿಫ್ಟ್ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ, ಓಮ್ನಿ ಕಾರು ರಾಷ್ಟ್ರೀಯ ಹೆದ್ದಾರಿ 66ರ ಕೊಲ್ಯದಿಂದ ಕುಂಪಲದ ಕಡೆಗೆ ಹೋಗುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದಿದೆ. ಪರಿಣಾಮವಾಗಿ ಬೈಕ್ ಸವಾರ ಆರಿಫ್ (20)ಗಂಭೀರ ಗಾಯಗೊಂಡಿದ್ದಾರೆ.
ಕೋಟೆಕಾರು ಪಟ್ಟಣ ವ್ಯಾಪ್ತಿಯ ಮಾಡೂರು ಪಾನೀರು ಎಂಬಲ್ಲಿ ದೇರಳಕಟ್ಟೆಯಿಂದ ಮಾಡೂರಿನ ಕಡೆಗೆ ತೆರಳುತ್ತಿದ್ದ ಪಲ್ಸರ್ ಬೈಕೊಂದು ಸ್ಕಿಡ್ ಆಗಿ ರಸ್ತೆ ಅಂಚಿನ ಕಮರಿಗೆ ಬಿದ್ದ ಪರಿಣಾಮ ಸವಾರ ಕೊಂಡಾಣ ನಿವಾಸಿ ದೇವಿಪ್ರಸಾದ್(28)ತಲೆಗೆ ಗಂಭೀರ ಗಾಯವಾಗಿದ್ದರೆ, ಸಹಸವಾರ ಮಾಡೂರು ನಿವಾಸಿ ದಯಾನಂದ್(34)ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ದೇವಿಪ್ರಸಾದ್‌ರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.