ಎಂಸಿಸಿ ಅಧ್ಯಕ್ಷ ಸ್ಥಾನಕ್ಕೆ ಪವಾರ್ ರಾಜೀನಾಮೆ
Update: 2016-07-25 00:06 IST
ಮುಂಬೈ, ಜು.24: ಮುಂಬೈ ಕ್ರಿಕೆಟ್ ಸಂಸ್ಥೆಯ (ಎಂಸಿಸಿ)ಅಧ್ಯಕ್ಷ ಸ್ಥಾನಕ್ಕೆ ಬಿಸಿಸಿಐ ಮತ್ತು ಐಸಿಸಿ ಯ ಮಾಜಿ ಅಧ್ಯಕ್ಷ ಶರದ್ ಪವಾರ್ ಇಂದು ರಾಜೀನಾಮೆ ನೀಡಿದ್ದಾರೆ
70 ವರ್ಷ ದಾಟಿರುವ ವ್ಯಕ್ತಿಗಳು ಕ್ರಿಕೆಟ್ ಆಡಳಿತದಲ್ಲಿರಬಾರದು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಪವಾರ್ ಎಂಸಿಸಿ ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸಿದ್ದಾರೆ.
76ರ ಹರೆಯದ ಪವಾರ್ ಈ ಹಿಂದೆ ಐಸಿಸಿ ಅಧ್ಯಕ್ಷರಾಗಿ 2010ರಿಂದ 2012ರ ತನಕ ಮತ್ತು ಬಿಸಿಸಿಐ ಅಧ್ಯಕ್ಷರಾಗಿ 2005ರಿಂದ 2008ರ ತನಕ ಸೇವೆ ಸಲ್ಲಿಸಿದ್ದರು.
ಪವಾರ್ ರಾಜೀನಾಮೆ ಬಳಿಕ ಇದೀಗ ವಿವಿಧ ಕ್ರಿಕೆಟ್ ಸಂಸ್ಥೆಗಳಲ್ಲಿ ಮುಖ್ಯಸ್ಥರಾಗಿರುವ ಆಡಳಿತಗಾರರು ನಿರ್ಗಮನದ ಹಾದಿಯಲ್ಲಿದ್ದಾರೆ
ತಮಿಳುನಾಡು ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಎನ್.ಶ್ರೀನಿವಾಸನ್(71) ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ನಿರಂಜನ ಶಾ(72) ನಿರ್ಗಮನದ ಹಾದಿಯಲ್ಲಿದ್ದಾರೆ.