ಸಾರಿಗೆ ಮುಷ್ಕರ: ಪ್ರಯಾಣಿಕರ ಪರದಾಟ
Update: 2016-07-25 23:58 IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸಿದರು. ರೋಗಿಗಳು, ಗರ್ಭಿಣಿಯರು, ವೃದ್ಧರು ಸೇರಿದಂತೆ ಪ್ರಯಾಣಿಕರು ಪರದಾಡ ಬೇಕಾಯಿತು. ಅಲ್ಲದೆ, ಸರಕಾರಿ ಬಸ್‌ಗಳು ರಸ್ತೆಗಿಳಿಯದ ಹಿನ್ನೆಲೆಯಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು.