ಡಿವೈಎಸ್ಪಿ ಕಲ್ಲಪ್ಪ ಹಂಡಿಬಾಗ್ ಕುಟುಂಬದಿಂದ ಸಿಎಂ ಭೇಟಿ

Update: 2016-07-25 19:00 GMT

ಬೆಂಗಳೂರು, ಜು.25: ಆತ್ಮಹತ್ಯೆಗೆ ಶರಣಾಗಿದ್ದ ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಬಾಗ್ ಕುಟುಂಬ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.

ಸೋಮವಾರ ನಗರದಲ್ಲಿನ ಅಧಿಕೃತ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿಯನ್ನು ಭೇಟಿ ಮಾಡಿದ ಕುಟುಂಬ ಸದಸ್ಯರು, ಕಲ್ಪಪ್ಪ ಹಂಡಿಬಾಗ್ ಅಮಾಯಕ, ಆತನ ಆತ್ಮಹತ್ಯೆಗೆ ಕಾರಣರಾದವರನ್ನು ಶೀಘ್ರವೇ ಪತ್ತೆಹಚ್ಚಿ ಶಿಕ್ಷೆಗೆ ಒಳಪಡಿಸಬೇಕು ಎಂದು ಮನವಿ ಮಾಡಿದರು. ಕುಟುಂಬ ಸದಸ್ಯರ ಮನವಿಯನ್ನು ಪುರಸ್ಕರಿಸಿದ ಮುಖ್ಯಮಂತ್ರಿ, ಕಲ್ಲಪ್ಪ ಪತ್ನಿಗೆ ಸರಕಾರಿ ನೌಕರಿ ಕೊಡಿಸುವ ಭರವಸೆಯನ್ನು ಈಗಾಗಲೇ ನೀಡಿದ್ದೇನೆ. ಅದರಂತೆ, ಶೀಘ್ರದಲ್ಲೇ ಉದ್ಯೋಗಕ್ಕೆ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು.

ರಾಜ್ಯ ವಸತಿ ಮಹಾಮಂಡಳದ ಅಧ್ಯಕ್ಷ ಹಾಗೂ ಶಾಸಕ ಎಸ್.ಟಿ. ಸೋಮ ಶೇಖರ್, ಕಲ್ಪಪ್ಪ ಸಹೋದರನಿಗೆ ಸಹಕಾರ ಸಂಘವೊಂದರಲ್ಲಿ ಉದ್ಯೋಗ ಕೊಡಿಸುವ ಆಶ್ವಾಸನೆಯನ್ನು ಇದೇ ಸಂದರ್ಭದಲ್ಲಿ ನೀಡಿದರು.

ಮುಖ್ಯಮಂತ್ರಿ ಭೇಟಿ ಸಂದರ್ಭದಲ್ಲಿ ಶಾಸಕ ಎ.ಎಸ್.ಪಾಟೀಲ್(ನಡಹಳ್ಳಿ), ಕಲ್ಲಪ್ಪ ಅವರ ಪತ್ನಿ ವಿದ್ಯಾ, ಅವರ ತಂದೆ ಮತ್ತು ತಾಯಿ, ಕಲ್ಲಪ್ಪ ಅವರ ತಂದೆ, ತಾಯಿ, ಸಹೋದರ, ಸಹೋದರಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News