×
Ad

ದುಬಾರಿಯಾದರೂ ಖಾಸಗಿ ವಾಹನಗಳ ಮೊರೆಹೋಗಬೇಕಾದ ಅನಿವಾರ್ಯತೆ

Update: 2016-07-26 11:57 IST

ಮಂಗಳೂರು, ಜು.26: ರಾಜ್ಯದಲ್ಲಿ ಕೆಎಸ್ಸಾರ್ಟಿಸಿ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಮುಷ್ಕರವು ಎರಡನೆ ದಿನಕ್ಕೆ ಕಾಲಿಟ್ಟಿದೆ. ಪ್ರಯಾಣಕ್ಕಾಗಿ ಕೆಎಸ್ಸಾರ್ಟಿಸಿ ಬಸ್‌ಗಳನ್ನು ಅವಲಂಬಿಸಿದ್ದ ಪ್ರಯಾಣಿಕರು ಇಂದು ಕೂಡಾ ಖಾಸಗಿ ವಾಹನಗಳ ಮೊರೆಹೋಗಬೇಕಾದ ಅನಿವಾರ್ಯತೆ ಇದೆ.

ಗ್ರಾಮೀಣ ಭಾಗಗಳಲ್ಲಿ ಬಸ್ ಸೌಕರ್ಯವಿಲ್ಲದೆ ವಿದ್ಯಾರ್ಥಿಗಳು ಇಂದು ಕೂಡಾ ಖಾಸಗಿ ವಾಹನಗಳಲ್ಲಿ ಪ್ರಯಾಸಪಟ್ಟು ಶಾಲಾ ಕಾಲೇಜುಗಳಿಗೆ ತೆರಳಿದ್ದಾರೆ. ಕೆಎಸ್ಸಾರ್ಟಿಸಿ ಬಸ್‌ಗಳು ಇಲ್ಲದ ಕಾರಣ ಇಂದು ಕೂಡಾ ಕೆಲ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ವಿರಳವಾಗಿದೆ. ಕೆಲವೊಂದು ಗ್ರಾಮೀಣ ಭಾಗಗಳಲ್ಲಿ ಕೆಎಸ್ಸಾರ್ಟಿಸಿ ಬಸ್‌ಗಳ ಬದಲಾಗಿ ಖಾಸಗಿ ವಾಹನಗಳು ಸಂಚರಿಸುತ್ತಿವೆ. ಆದರೆ ಈ ವಾಹನಗಳು ಪ್ರಯಾಣಿಕರಿಂದ ದುಪ್ಪಟ್ಟು ದರವನ್ನು ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪಗಳೂ ಕೇಳಿಬರುತ್ತಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News